ರಾಜ್ಯ

ಧಾರವಾಡ: ಕಾಲೇಜು ವಿದ್ಯಾರ್ಥಿನಿಯ ಅಪಹರಣ, ದರೋಡೆ

ಬಸ್ ಗಾಗಿ ಕಾಯುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿದ ದುಷ್ಕರ್ಮಿಗಳು ಚಲಿಸುತ್ತಿದ್ದ ವ್ಯಾನ್ ನಲ್ಲಿ ಆಕೆಯನ್ನು ದರೋಡೆ ಮಾಡಿರುವ ಘಟನೆ ...

ಧಾರವಾಡ: ಕಾಲೇಜು ವಿದ್ಯಾರ್ಥಿನಿಯ ಅಪಹರಣ, ದರೋಡೆ
ಸಾಂದರ್ಭಿಕ ಚಿತ್ರ
Published On :

ಧಾರವಾಡ: ಬಸ್ ಗಾಗಿ ಕಾಯುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿದ ದುಷ್ಕರ್ಮಿಗಳು ಚಲಿಸುತ್ತಿದ್ದ ವ್ಯಾನ್ ನಲ್ಲಿ ಆಕೆಯನ್ನು ದರೋಡೆ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡದ ವಿದ್ಯಾಗಿರಿಯಲ್ಲಿ ಟ್ಯೂಶನ್ ಮುಗಿಸಿ ವಾಪಸ್ ಮನೆಗೆ ತೆರಳಲು ಬಸ್ ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಯನ್ನು  ಕಿಡ್ನಾಪ್ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ,

ಬಸ್ ಗಾಗಿ ಸಂತ್ರಸ್ತೆ ತನ್ನ ಸಹಪಾಠಿ ಶಶಿ( ಹೆಸರು ಬದಲಾಯಿಸಲಾಗಿದೆ) ಜೊತೆ ಕಾಯುತ್ತಿದ್ದಳು. ಈ ವೇಳೆ ಶಶಿ ನೀರಿನ ಬಾಟಲ್ ತರಲು ತೆರಳಿದಾಗ, ಮಾರುತಿ ವ್ಯಾನ್ ನಲ್ಲಿ ಬಂದವರು ಆಕೆಯನ್ನು ಅಪಹರಿಸಿ ಪರಾರಿಯಾಗಿದ್ದಾರೆ. ಆಕೆ ಅವರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಳಾದರೂ ಸಾಧ್ಯವಾಗಲಿಲ್ಲ.  ಮುಖಕ್ಕೆ ಮಾಸ್ಕ್ ಹಾಕಿಕೊಂಡಿದ್ದ ಅಪಹರಣಕಾರರು ಆಕೆಯನ್ನು ಕಾರಿನಲ್ಲಿ ಎಳೆದೊಯ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆಯ ಬಳಿ ಹಣಕ್ಕೆ ಒತ್ತಾಯಿಸಿದ ದುಷ್ಕರ್ಮಿಗಳು ವಿದ್ಯಾರ್ಥಿನಿ ಬಳಿಯಿದ್ದ 1,800 ರು ಹಣ ಮತ್ತು ಚಿನ್ನದ ಒಡವೆಗಳನ್ನು ದೋಚಿದ್ದಾರೆ.  ನಂತರ ದೊಡ್ಡ ವಾಡ್ ಶಾಲೆಯ ಬಳಿ ಆಕೆಯನ್ನು  ಕಾರಿನಿಂದ ಹೊರ ತಳ್ಳಿ ಪರಾರಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.