ರಾಜ್ಯ

ತುಮಕೂರು: 15 ದಲಿತ ಕುಟುಂಬಗಳ ಮೇಲೆ ಹಲ್ಲೆ, ಪರಿಸ್ಥಿತಿ ಉದ್ವಿಗ್ನ

: ತುಮಕೂರು ಜಿಲ್ಲೆಯ ಕುರಿಪಾಳ್ಯ ಎಂಬ ಗ್ರಾಮದಲ್ಲಿ ನಡೆದ ಕೋಮು ಸಂಘರ್ಷದಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ....

ತುಮಕೂರು: 15 ದಲಿತ ಕುಟುಂಬಗಳ ಮೇಲೆ ಹಲ್ಲೆ, ಪರಿಸ್ಥಿತಿ ಉದ್ವಿಗ್ನ
ಸಾಂದರ್ಭಿಕ ಚಿತ್ರ
Published On :

ತುಮಕೂರು: ತುಮಕೂರು ಜಿಲ್ಲೆಯ ಕುರಿಪಾಳ್ಯ ಎಂಬ ಗ್ರಾಮದಲ್ಲಿ ನಡೆದ ಕೋಮು ಸಂಘರ್ಷದಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

15 ದಲಿತ ಕುಟುಂಬಗಳ ಮೇಲೆ ಯುವಕರ ಗುಂಪೊಂದು ದಾಳಿ ನಡೆಸಿ, ಮನೆಯ ಕಿಟಕಿ ಹಾಗೂ ಬಾಗಿಲುಗಳನ್ನು ನಾಶ ಮಾಡಲಾಗಿದೆ. ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೇಂದ್ರ ವಿಭಾಗದ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಮತ್ತು ಎಸ್ ಪಿ ಇಶಾ ಪಂಥ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ,

ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ದಲಿತರ ಗುಂಪೊಂದು ಜೂಜಾಟ ಆಡುತ್ತಿತ್ತು. ಈ ವೇಳೆ ಅಲ್ಲಿಗೆ ಬಂದ ಮುಸ್ಲಿಮ್ ಯುವಕರು ತಾವು ಆಟದಲ್ಲಿ ಭಾಗಿಯಾಗುವುದಾಗಿ ಹೇಳಿದ್ದಾರೆ. ಆದರೆ ಇದಕ್ಕೆ ದಲಿತರ ಗುಂಪು ಆಟಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದೆ. ಇದರಿಂದ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ.

ಡಿಎಸ್ ಎಸ್ ಮತ್ತು ಬಿಜೆಪಿ ಮುಖಂಡರು ತಿಲಕ್ ಪಾರ್ಕ್ ಪೊಲೀಸ್ ಠಾಣೆಗೆ ಭೇಟಿ ನೀಡಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.