ರಾಜ್ಯ

ಬೆಂಗಳೂರಿನಲ್ಲಿ ಭೀಕರ ಅಗ್ನಿ ಅವಘಡ; ಇಬ್ಬರ ಸಜೀವ ದಹನ

ಕುರ್ಚಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಕಾರ್ಮಿಕರು ಸಜೀವವಾಗಿ ದಹನವಾದ ಘಟನೆ ಬೆಂಗಳೂರಿನಲ್ಲಿ ಶುಕ್ರವಾರ ನಡೆದಿದೆ.

ಬೆಂಗಳೂರಿನಲ್ಲಿ ಭೀಕರ ಅಗ್ನಿ ಅವಘಡ; ಇಬ್ಬರ ಸಜೀವ ದಹನ
ಅಗ್ನಿ ಅವಘಡ
Published On :

ಬೆಂಗಳೂರು: ಕುರ್ಚಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಕಾರ್ಮಿಕರು ಸಜೀವವಾಗಿ ದಹನವಾದ ಘಟನೆ ಬೆಂಗಳೂರಿನಲ್ಲಿ ಶುಕ್ರವಾರ ನಡೆದಿದೆ.

ಬೆಂಗಳೂರಿನ ಹಳೇ ಗುಡ್ಡದಹಳ್ಳಿ ಪ್ರದೇಶದ ವಿನಾಯಕ ನಗರದಲ್ಲಿರುವ 4 ಆಂತಸ್ತಿನ ಕಟ್ಟಡದಲ್ಲಿ ಮಧ್ಯಾಹ್ನ ಸುಮಾರು 12.30ರ ವೇಳೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಕಟ್ಟಡವನ್ನು ಆವರಿಸಿದೆ. ಕಟ್ಟಡದ ಕೆಳ ಅಂತಸ್ತಿನಲ್ಲಿ ಕುರ್ಚಿ ತಯಾರಿಕಾ ಕಾರ್ಖಾನೆ ಇದ್ದು, ಇಲ್ಲೇ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ಸುಮಾರು 10 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಈ ಪೈಕಿ ಇಬ್ಬರು ಬಿಹಾರ ಮೂಲದ ಕಾರ್ಮಿಕರು ಸಜೀವವಾಗಿ ದಹನವಾಗಿದ್ದಾರೆ.

ವಿಚಾರ ತಿಳಿದ ಕೂಡಲೇ ಐದಕ್ಕೂ ಹೆಚ್ಚು ಅಗ್ನಿ ಶಾಮಕ ವಾಹನಗಳು ಸ್ಥಳಕ್ಕಾಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಅಂತೆಯೇ ಮೂರು ಆ್ಯಂಬುಲೆನ್ಸ್ ಗಳೂ ಕೂಡ ಸ್ಥಳಕ್ಕೆ ದೌಡಾಯಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವ ಕೆಲಸ ಮಾಡುತ್ತಿವೆ.

ಸ್ಛಳೀಯರು ನೀಡಿರುವ ಮಾಹಿತಿಯಂತೆ ಕಟ್ಟಡದ 2ನೇ ಅಂತಸ್ತಿನಲ್ಲಿ ಮದರಸಾ ಮತ್ತು 3ನೇ ಅಂತಸ್ತಿನಲ್ಲಿ ಕೆಲ ಪಿಜಿ ವಿದ್ಯಾರ್ಥಿಗಳು ನೆಲೆಸಿದ್ದರು. ಅಪಾಯದಲ್ಲಿ ಸಿಲುಕಿದ್ದ ಇವರನ್ನು ಅಗ್ನಿ ಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಅಂತೆಯೇ ಕಟ್ಟಡದ ಅಕ್ಕಪಕ್ಕದ ಕಟ್ಟಡಗಳಿಗೂ ಬೆಂಕಿ ವ್ಯಾಪಿಸುವ ಅಪಾಯವಿದ್ದರಿಂದ ಈ ಕಟ್ಟಡಗಳಲ್ಲಿನ ನಿವಾಸಿಗಳನ್ನೂ ಕೂಡ ಸ್ಥಳಾಂತರಿಸಲಾಗಿದೆ. ಇನ್ನು ಕಾರ್ಯಾಚರಣೆ ವೇಳೆ ಅಗ್ನಿ ಶಾಮಕ ಸಿಬ್ಬಂದಿ ಹನುಮೇಶ್ ಎಂಬುವವರ ತಲೆ ಮೇಲೆ ಮೇಲ್ಛಾವಣಿ ಕುಸಿದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಅವಘಡಕ್ಕೀಡಾದ ಕಟ್ಟಡ ಸ್ಥಳೀಯ ನಿವಾಸಿ ಇಬ್ರಾಹಿಂ ಖಲೀಲ್ ಎಂಬುವವರಿಗೆ ಸೇರಿದ್ದು, ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಜೆಜೆ ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.