ರಾಜ್ಯ

ಜಿಲ್ಲಾಧಿಕಾರಿಗೆ ಧಮ್ಕಿ ಪ್ರಕರಣ: ಸಿಎಂ ಆಪ್ತ ಮರಿಗೌಡ ವಿರುದ್ಧ ಚಾರ್ಜ್ ಶೀಟ್

ಹಿಂದಿನ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಿ. ಶಿಖಾ ಅವರಿಗೆ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಮತ್ತು ಮೈಸೂರು ಜಿಲ್ಲಾ ಪಂಚಾಯಿತಿ ..

ಜಿಲ್ಲಾಧಿಕಾರಿಗೆ ಧಮ್ಕಿ ಪ್ರಕರಣ: ಸಿಎಂ ಆಪ್ತ ಮರಿಗೌಡ ವಿರುದ್ಧ ಚಾರ್ಜ್ ಶೀಟ್
ಕೆ. ಮರಿಗೌಡ
Published On :
ಮೈಸೂರು:  ಹಿಂದಿನ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಿ. ಶಿಖಾ ಅವರಿಗೆ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಮತ್ತು ಮೈಸೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ. ಮರಿಗೌಡ ಅವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.
ನಜರ್ ಬಾದ್ ಠಾಣೆ ಪೊಲೀಸರು ಗುರುವಾರ ಮೈಸೂರಿನ 3ನೇ ಜೆಎಂಎಫ್ ಸಿ ನ್ಯಾಯಲಯಕ್ಕೆ ಮರಿಗೌಡ ಮತ್ತು ಅವರ ಇಬ್ಬರು ಬೆಂಬಲಿಗರಾದ ಬಸವರಾಜ್ ಮತ್ತು ಮಂಜುನಾಥ್ ವಿರುದ್ಧ ಸುಮಾರು 45 ಪುಟಗಳ ಚಾರ್ಜ್ ಶೀಟ್ ನ್ನು ಸಲ್ಲಿಸಿದ್ದಾರೆ. ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಸಿ.ಶಿಖಾ ಅವರು ನಜರಬಾದ್ ಠಾಣೆಯಲ್ಲಿ ಮರೀಗೌಡ ವಿರುದ್ಧ ಸೆಕ್ಷನ್ 341, 354 ಮತ್ತು 504 ಅಡಿಯಲ್ಲಿ ದೂರು ದಾಖಲಿಸಿದ್ದರು. 
ಜುಲೈ 3ರ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಫ್ತಾರ್ ಕೂಟದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ್ದರು. ಶಿಷ್ಟಾಚಾರದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಸೇರಿದಂತೆ ಹಲವು ಅಧಿಕಾರಿಗಳು ಸರ್ಕಾರಿ ಅತಿಥಿ ಗೃಹದಲ್ಲಿ ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡಿದ್ದರು. ಆಗ ಅಲ್ಲಿಗೆ ಆಗಮಿಸಿದ್ದ ಡಿಸಿಯಾಗಿದ್ದ ಸಿ.ಸಿಖಾ ಅವರನ್ನು ಮರೀಗೌಡ ಏಕವಚನದಲ್ಲಿ ನಿಂದಿಸಿದ್ದರು. 
ಈ ಸಂಬಂಧ ಶಿಖಾ ಮರಿಗೌಡ ವಿರುದ್ಧ ಪ್ರಕರಣ ದಾಖಲಿಸಿದ್ದರು, ನಂತರ ಮರಿಗೌಡ ಕೆಲ ದಿನಗಳ ಕಾಲ ತಲೆ ಮರೆಸಿಕೊಂಡಿದ್ದರು, ಅದಾದ ಬಳಿಕ ಬಲವಂತವಾಗಿ ಮರಿಗೌಡ ಅವರು ನ್ಯಾಯಾಲಯಕ್ಕೆ ಶರಣಾಗಿದ್ದರು, ಆಗಸ್ಟ್ 3 ರಂದು ಕರ್ನಾಟಕ ಹೈಕೋರ್ಟ್ ಮರಿಗೌಡ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.