ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ: ಮದುವೆಗೆ ತೆರಳುತ್ತಿದ್ದ 7 ಮಂದಿ ಸ್ಥಳದಲ್ಲೇ ಸಾವು
ಮದುವೆಗೆ ತೆರಳುತ್ತಿದ್ದ 7 ಯುವಕರು ಅಪಘಾತದಿಂದಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಿಂಹಧಾಮ ಹತ್ತಿರದ ಮುದ್ದಿನಕೊಪ್ಪ ಬಳಿ ಬುಧವಾರ ತಡರಾತ್ರಿ...

Published On :
ಶಿವಮೊಗ್ಗ: ಮದುವೆಗೆ ತೆರಳುತ್ತಿದ್ದ 7 ಯುವಕರು ಅಪಘಾತದಿಂದಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಿಂಹಧಾಮ ಹತ್ತಿರದ ಮುದ್ದಿನಕೊಪ್ಪ ಬಳಿ ಬುಧವಾರ ತಡರಾತ್ರಿ ನಡೆದಿದೆ.
ಬೆಂಗಳೂರಿನಿಂದ ಸಾಗರಕ್ಕೆ ತೆರಳಿದ್ದ ಇನ್ನೋವಾ ಕಾರು, ಮರದ ದಿಮ್ಮಿಗಳನ್ನು ತುಂಬಿದ ಲಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಈ ವೇಳೆ ಲಾರಿಯಲ್ಲಿದ್ದ ದೊಡ್ಡ ದೊಡ್ಡ ಮರದ ದಿಮ್ಮಿಗಳು ಕಾರಿನ ಮೇಲೆ ಬಿದ್ದು ಇನ್ನೋವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿ ಹೋಗಿದೆ. ಕಾರಿನಲ್ಲಿದ್ದ ಚಾಲಕ ಸೇರಿದಂತೆ ಎಲ್ಲರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಾಗಡಿ ಮೂಲದ ಮಧು, ಪ್ರವೀಣ್ ಎಂಬ ಸಹೋದರರು, ಶಿಕಾರಿಪುರದ ರಾಘವೇಂದ್ರ, ಚೋರಡಿ ಮಂಜುನಾಥ್ , ಬೆಂಗಳೂರಿನ ಶ್ರೀಧರ್ ಮತ್ತು ಸೊರಬ ಮೂಲದ ರಾಜಶೇಖರ್ ಮೃತ ದುರ್ದೈವಿಗಳು. ಸಾಗರದಲ್ಲಿ ಸ್ನೇಹಿತನ ಮದುವೆಗಾಗಿ ತೆರಳಿದ್ದರು ಎಂದು ತಿಳಿದು ಬಂದಿದೆ. ಸ್ಥಳದಲ್ಲಿ 3 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮೃತ ದೇಹಗಳನ್ನು ಹೊರಗೆ ತೆಗೆಯಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


