ಜಮ್ಮು ಕಾಶ್ಮೀರ: ಗುಂಡು ಹಾರಿಸಿಕೊಂಡು ಬೆಳಗಾವಿ ಯೋಧ ಆತ್ಮಹತ್ಯೆ
ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿನಿಯಂತ್ರಣ ರೇಖೆ ಬಳಿಯ ಲಾಮ್ ವಲಯದಲ್ಲಿ ಕರ್ನಾಟಕದ ಯೋಧರೊಬ್ಬರು ರೈಫಲ್‌ನಿಂದ ಗುಂಡು ಹಾರಿಸಿಕೊಂಡು ..

Published On :
ಬೆಳಗಾವಿ: ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿನಿಯಂತ್ರಣ ರೇಖೆ ಬಳಿಯ ಲಾಮ್ ವಲಯದಲ್ಲಿ ಕರ್ನಾಟಕದ ಯೋಧರೊಬ್ಬರು ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
54 ರಾಷ್ಟ್ರೀಯ ರೈಫಲ್ಸ್‌ನ ಲ್ಲಿ ಕೆಲಸ ಮಾಡುತ್ತಿದ್ದ ಬೆಳಗಾವಿ ಮೂಲದ ವಿಶಾಲ್ ಪಾಂಡುರಂಗ ಲೋಹರ್ ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ಕಾರಣ ಏನು ಎಂಬುದು ಇದುವರೆಗೂ ತಿಳಿದಿಲ್ಲ. ಯೋಧನ ಆತ್ಮಹತ್ಯೆ ಕುರಿತು ಸೇನೆ ತನಿಖೆಗೆ ಆದೇಶಿಸಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೇ 1ರಂದು ಪತ್ನಿಗೆ ಕರೆ ಮಾಡಿದ್ದ ವಿಶಾಲ್ ಎಂದಿನಂತೆ ಮಾತನಾಡಿದ್ದರು. ಕುಟುಂಬದ ಸದಸ್ಯರ ಜೊತೆ ಯಾವುದೇ ಸಮಸ್ಯೆ ಬಗ್ಗೆ ಹೇಳಿಕೊಂಡಿರಲಿಲ್ಲ. ವಿಶಾಲ್ ತಂದೆ, ತಾಯಿ, ಪತ್ನಿ ಮತ್ತು 4 ವರ್ಷದ ಪುತ್ರಿಯನ್ನು ಅಗಲಿದ್ದಾರೆ ಎಂದು ಸಂಬಂಧಿಕರು ತಿಳಿಸಿದ್ದಾರೆ.
ವಿಶಾಲ್ ಗುಂಡು ಹಾರಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿಶಾಲ್ ಸಹೋದ್ಯೋಗಿಗಳು ಕುಟುಂಬಸ್ಥರಿಗೆ ತಿಳಿಸಿದ್ದಾರೆ. ಆದರೆ ಸೇನೆ ಕಚೇರಿಯಿಂದ ವಿಶಾಲ್ ಸಾವಿನ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ವಿಶಾಲ್ ಕಿರಿಯ ಸಹೋದರ, ದಿಲಿಪ್ ಪಾಂಡುರಂಗ ಲೋಹರ್ ಕೂಡ ಅದೇ ರೆಜಿಮೆಂಟ್ ನಲ್ಲಿ ಕೆಲಸ ಮಾಡುತ್ತಿದ್ದಾರೆ, ಆದರೆ ವಿಶಾಲ್ ಸಹೋದರನೊಂದಿಗ ಯಾವುದೇ ಸಮಸ್ಯೆಗಳ ಬಗ್ಗೆ ಹೇಳಿಕೊಂಡಿರಲಿಲ್ಲ ಎಂದು ಸಂಬಂಧಿಕರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


