ರಾಜ್ಯ

ಹಾವೇರಿ: ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ರೈತ

ಬ್ಯಾಡಗಿ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತರೊಬ್ಬರು ನಿನ್ನೆ ಆತ್ಮಹತ್ಯೆ...

ಹಾವೇರಿ: ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ರೈತ
ಸಾಂದರ್ಭಿಕ ಚಿತ್ರ
Published On :
ಹಾವೇರಿ: ಬ್ಯಾಡಗಿ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತರೊಬ್ಬರು ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಅವರು ತೆಗೆಸಿದ್ದ ಬೋರ್ ವೆಲ್ ನಲ್ಲಿ ನೀರು ಸಿಗದೆ ಖಿನ್ನತೆಗೆ ಒಳಗಾಗಿದ್ದರು.
ಶಾಂತಪ್ಪ ಶೇಖಪ್ಪ ಪುಟ್ಟಣ್ಣವರ್(62) ಬ್ಯಾಂಕಿನಲ್ಲಿ 3 ಲಕ್ಷ ಹಾಗೂ ಖಾಸಗಿ ವ್ಯಕ್ತಿಗಳ ಬಳಿ 2 ಲಕ್ಷ ರೂಪಾಯಿ ಸಾಲ ಹೊಂದಿದ್ದರು ಎಂದು ಪೊಲೀಸ್ ಮೂಲಗಳು  ತಿಳಿಸುತ್ತವೆ. ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದೇ ರೀತಿಯ ಇನ್ನೊಂದು ಘಟನೆಯಲ್ಲಿ ಕೋಲಾರ ತಾಲ್ಲೂಕಿನ ರೈತರೊಬ್ಬರು ಕಳೆದ ತಿಂಗಳು 13ರಂದು ಬಾವಿಗೆ ಹಾರಿ ಮೃತಪಟ್ಟಿದ್ದರು. ಆತ್ಮಹತ್ಯೆ ಮಾಡುವುದಕ್ಕೆ ಮುನ್ನಾ ದಿನ ಸಾಲ ಕಟ್ಟುವಂತೆ ಬ್ಯಾಂಕಿನಿಂದ ಅವರಿಗೆ ನೊಟೀಸ್ ಬಂದಿತ್ತು.
ನಾರಾಯಣಪ್ಪ ಮತ್ತು ಕುಟುಂಬದವರಿಗೆ 12 ಎಕರೆ ಜಮೀನು ಇತ್ತು. ಕೃಷಿಗೆಂದು 15 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.