ರಾಜ್ಯ

ಮುಂದಿನವಾರ ಎಸ್ ಎಸ್ ಎಲ್ ಸಿ ಫಲಿತಾಂಶ!

ಪ್ರಸಕ್ತ ಸಾಲಿನ ಎಸ್‌ ಎಸ್‌ ಎಲ್ ಸಿ ಫಲಿತಾಂಶ ಮುಂದಿನ ವಾರ ಪ್ರಕಟಗೊಳ್ಳುವ ಸಾಧ್ಯತೆ ಇದ್ದು, ಈಗಾಗಲೇ ಈ ಸಂಬಂಧ ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ತಿಳಿದುಬಂದಿದೆ.

ಮುಂದಿನವಾರ ಎಸ್ ಎಸ್ ಎಲ್ ಸಿ ಫಲಿತಾಂಶ!
ಸಂಗ್ರಹ ಚಿತ್ರ
Published On :

ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ ಎಸ್‌ ಎಲ್ ಸಿ ಫಲಿತಾಂಶ ಮುಂದಿನ ವಾರ ಪ್ರಕಟಗೊಳ್ಳುವ ಸಾಧ್ಯತೆ ಇದ್ದು, ಈಗಾಗಲೇ ಈ ಸಂಬಂಧ ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ತಿಳಿದುಬಂದಿದೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಈ ಸಂಬಂಧ ಇಂದು ಸಂಜೆ ಮಹತ್ವದ ಸಭೆ ಕರೆದಿದ್ದು, ಸಂಜೆ ವೇಳೆಗೆ ಫಲಿತಾಂಶ ಪ್ರಕಟ ದಿನಾಂಕ ಮತ್ತು ಮುಂದಿನ ಕ್ರಮಗಳ ಕುರಿತು ಅಧಿಕೃತ ಪ್ರಕಟಣೆ ಹೊರಡಿಸುವ ಸಾಧ್ಯತೆ  ಇದೆ.

ಕೆಲ ಮಾಧ್ಯಮಗಳಲ್ಲಿ ಮೇ 12 ಅಥವಾ ಮೇ 16ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎಂದು ವರದಿ ಮಾಡಲಾಗಿದೆಯಾದರೂ ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕೃತ ಮಾಹಿತಿ ನೀಡಿಲ್ಲ. ಇಂದು ಸಂಜೆ ನಡೆಯುವ ಮಹತ್ವದ  ಸಭೆ ಬಳಿಕವಷ್ಟೇ ಈ ಬಗ್ಗೆ ಸ್ಪಷ್ಟ ಮಾಹಿತಿ ದೊರೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.