ರಾಜ್ಯ

ಹಣಕಾಸಿನ ಒತ್ತಡ: ಬೆಳಗಾವಿಯಲ್ಲಿ ರೈತ ಆತ್ಮಹತ್ಯೆಗೆ ಶರಣು

ಇತ್ತೀಚೆಗೆ ನಡೆದ ಬೆಂಕಿ ದುರಂತದಲ್ಲಿ ಮನೆ ಕಳೆದುಕೊಂಡಿದ್ದ ರೈತನೊಬ್ಬ ಹಣಕಾಸಿನ ಒತ್ತಡದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯ ...

ಹಣಕಾಸಿನ ಒತ್ತಡ: ಬೆಳಗಾವಿಯಲ್ಲಿ ರೈತ ಆತ್ಮಹತ್ಯೆಗೆ ಶರಣು
ಸಾಂದರ್ಭಿಕ ಚಿತ್ರ
Published On :
ಬೆಳಗಾವಿ: ಇತ್ತೀಚೆಗೆ ನಡೆದ ಬೆಂಕಿ ದುರಂತದಲ್ಲಿ ಮನೆ ಕಳೆದುಕೊಂಡಿದ್ದ ರೈತನೊಬ್ಬ ಹಣಕಾಸಿನ ಒತ್ತಡದಿಂದ ಬೇಸತ್ತು  ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯ ಸವದತ್ತಿ ತಾಲೂಕಿನ ಹಂಚಿನಾಳದಲ್ಲಿ ನಡೆದಿದೆ.
ಹಂಚಿನಾಳ ಗ್ರಾಮದ ಈರಪ್ಪ ರಾಮಚಂದ್ರ ಕಂಬಾರ್ ಮೃತ ದುರ್ದೈವಿ. ಕಂಬಾರ್ 3 ಎಕರೆ ಜಮೀನು ಹೊಂದಿದ್ದರು, ಜೊತೆಗೆ ಕೃಷಿಗಾಗಿ 2 ಲಕ್ಷ ರು ಸಾಲ ಪಡೆದಿದ್ದರು. ಬರದಿಂದಾಗಿ ಕಂಬಾರ್ ಬೆಳೆದಿದ್ದ ಬೆಳೆ ನಷ್ಟವಾಗಿತ್ತು, ಇದರಿಂದ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು.
ಇತ್ತೀಚೆಗೆ ಹಂಚಿನಾಳ ಗ್ರಾಮದಲ್ಲಿ ನಡೆದ ಬೆಂಕಿ ದುರಂತದಲ್ಲಿ ಈರಪ್ಪ ಕಂಬಾರ್ ತಮ್ಮ ಮನೆ ಕಳೆದು ಕೊಂಡಿದ್ದರು. ಇದೆಲ್ಲದರ ನಡುವೆ ಬ್ಯಾಂಕ್ ನವರು ಮತ್ತು ಸ್ಥಳೀಯ ಹಣಕಾಸು ಸಂಸ್ಥೆಗಳು ಹಣ ಪಾವತಿಸುವಂತೆ ಒತ್ತಡ ಹೇರುತ್ತಿದ್ದರು, ಹೀಗಾಗಿ ಮಾಡಿದ ಸಾಲ ತೀರಿಸಲಾಗದೇ ಈರಪ್ಪ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ, ಈ ಸಂಬಂಧ ಸವದತ್ತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.