ಮಲ್ಟಿಫ್ಲೆಕ್ಸ್ ಗಳಲ್ಲಿ ಟಿಕೆಟ್ ದರ ವಾರಾಂತ್ಯಗಳಲ್ಲಿ ಅನ್ವಯಿಸುವುದಿಲ್ಲ: ಸರ್ಕಾರಕ್ಕೆ ಹೈಕೋರ್ಟ್ ಚಾಟಿ
ಮಲ್ಟಿಫ್ಲೆಕ್ಸ್ ಗಳಲ್ಲಿ 200 ರು ಟಿಕೆಟ್ ದರ ನಿಗದಿ ಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿ 10 ದಿನಗಳಾಗಿತ್ತು, ಆದರೆ ವಾರಾಂತ್ಯಗಳಲ್ಲಿ ಮತ್ತು ರಜಾ ದಿನಗಳಲ್ಲಿ ಈ ...

Published On :
ಬೆಂಗಳೂರು: ಮಲ್ಟಿಫ್ಲೆಕ್ಸ್ ಗಳಲ್ಲಿ 200 ರು ಟಿಕೆಟ್ ದರ ನಿಗದಿ ಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿ 10 ದಿನಗಳಾಗಿತ್ತು, ಆದರೆ ವಾರಾಂತ್ಯಗಳಲ್ಲಿ ಮತ್ತು ರಜಾ ದಿನಗಳಲ್ಲಿ ಈ ದರ ಅನ್ವಯವಾಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಎಲ್ಲ ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ಟಿಕೆಟ್‌ಗಳ ದರ ಗರಿಷ್ಠ 200 ಮೀರಬಾರದು ಎಂಬ ರಾಜ್ಯ ಸರ್ಕಾರದ ಆದೇಶ ವಾರಾಂತ್ಯ ಮತ್ತು ರಜಾದಿನಗಳಿಗೆ ಅನ್ವಯ ಆಗುವುದಿಲ್ಲ ಎಂದು ಹೈಕೋರ್ಟ್ ಗುರುವಾರ ಸೂಚಿಸಿದೆ.
ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿಎಫ್‌ಐಸಿಸಿಐ ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ಮಧ್ಯಂತರ ಆದೇಶ ನೀಡಿದೆ.
ಸರ್ಕಾರದ ಈ ಆದೇಶ ಬಂಡವಾಳ ಹೂಡಿದವರಿಗೆ ತೊಂದರೆ ಉಂಟು ಮಾಡುವಂತಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


