ಸಚಿವರ ಶಾಲೆಯಲ್ಲಿ ಆರ್ ಟಿ ಇ ಸೀಟು ಕೊಡಿಸುವ ಭರವಸೆ ನೀಡಿದ ತನ್ವೀರ್ ಸೇಠ್
ಸಚಿವ ಡಿ.ಕೆ ಶಿವಕುಮಾರ್ ಅವರ ಮಾಲೀಕತ್ವದ ಶಾಲೆಯಲ್ಲಿ ಆರ್ ಟಿ ಇ ಅಡಿಯಲ್ಲಿ ಮಕ್ಕಳಿಗೆ ಸೀಟು ಕೊಡಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷ ಸಚಿವ ತನ್ವೀರ್...

Published On :
ಬೆಂಗಳೂರು: ಸಚಿವ ಡಿ.ಕೆ ಶಿವಕುಮಾರ್ ಅವರ ಮಾಲೀಕತ್ವದ ಶಾಲೆಯಲ್ಲಿ ಆರ್ ಟಿ ಇ ಅಡಿಯಲ್ಲಿ ಮಕ್ಕಳಿಗೆ ಸೀಟು ಕೊಡಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷ ಸಚಿವ ತನ್ವೀರ್ ಸೇಠ್ ಭರವಸೆ ನೀಡಿದ್ದಾರೆ.
ರಾಜರಾಜೇಶ್ವರಿ ನಗರದಲ್ಲಿರುವ ಹಿಲ್ ವ್ಯೂ ಶಾಲೆಯಲ್ಲಿ ಆರ್ ಟಿ ಇ ಸೀಟು ಸಿಗಲಿಲ್ಲವೆಂದು ಆರೋಪಿಸಿ ಪೋಷಕರು ಪ್ರತಿಭಟನೆ ನಡೆಸಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ತನ್ವೀರ್ ಸೇಠ್, ಯಾರೇ ಆದರೂ ಸರ್ಕಾರದ ನಿಯಮಗಳನ್ನು ಉಲ್ಲಂಘಿಸುವಂತಿಲ್ಲ, ನಿಯಮ ಉಲ್ಲಂಘಿಸಿದರೇ ಅಂತ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳ ಮೂಲಕ ನನಗೆ ವಿಷಯ ತಿಳಿಯಿತು. ಶೈಕ್ಷಣಿಕಾ ಕಾಯಿದೆಗೆ ತಿದ್ದುಪಡಿ ತರಲಾಗಿದೆ. ಪೋಷಕರು ಸಲ್ಲಿಸುವ ಆದಾಯ ಪ್ರಮಾಣ ಪತ್ರವನ್ನು ಪರಿಶೀಲಿಸಿ ನಂತರ ಶಾಲೆಗೆ ಸಲ್ಲಿಸಲಾಗುತ್ತದೆ ಎಂದು ಹೇಳಿದ್ದಾರೆ.
ಎಲ್ ಕೆಜಿಗೆ ಈಗಾಗಲೇ ಆರ್ ಟಿ ಇ ಅಡಿಯಲ್ಲಿ ಸೀಟು ಕೊಡಿಸಲಾಗಿದೆ, ಹಾಗಾಗಿ ಈ ವರ್ಷ 1ನೇ ತರಗತಿ ವಿದ್ಯಾರ್ಥಿಗಳಿಗೆ ಆರ್ ಟಿ ಇ ಅಡಿಯಲ್ಲಿ ಸೀಟು ಕೊಡಲು ಸಾಧ್ಯವಿಲ್ಲ ಎಂದು ಡಿ.ಕೆ ಶಿವಕುಮಾರ್ ಮಾಧ್ಯಮಗಳಿಗೆ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
D K ShivakumarTanveer SaitNational Hill View SchoolRTE quotaತನ್ವೀರ್ ಸೇಟ್. ಡಿ.ಕೆ ಶಿವಕುಮಾರ್ನ್ಯಾಷನಲ್ ಹಿಲ್ ವ್ಯೂ ಶಾಲೆಆರ್ ಟಿಇ ಸೀಟು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


