ಮೈಸೂರು ಅರಮನೆ ಎಟಿಎಂಗೆ ಬೆಂಕಿ: ಲಕ್ಷಾಂತರ ಹಣ ಭಸ್ಮ
ಮೈಸೂರಿನ ಪಾರಂಪರಿಕ ಅರಮನೆಯ ಪ್ರವಾಸ ದ್ವಾರದಲ್ಲಿರುವ ಎಟಿಎಂ ಕೇಂದ್ರಕ್ಕೆ ಬೆಂಕಿ ಹೊತ್ತುಕೊಂಡ ಪರಿಣಾಮ ಲಕ್ಷಾಂತರ ರೂಪಾಯಿ ನೋಟುಗಳು ಸುಟ್ಟು ಭಸ್ಮವಾಗಿರುವ...

Published On :
ಮೈಸೂರು: ಮೈಸೂರಿನ ಪಾರಂಪರಿಕ ಅರಮನೆಯ ಪ್ರವಾಸ ದ್ವಾರದಲ್ಲಿರುವ ಎಟಿಎಂ ಕೇಂದ್ರಕ್ಕೆ ಬೆಂಕಿ ಹೊತ್ತುಕೊಂಡ ಪರಿಣಾಮ ಲಕ್ಷಾಂತರ ರೂಪಾಯಿ ನೋಟುಗಳು ಸುಟ್ಟು ಭಸ್ಮವಾಗಿರುವ ಘಟನೆ ಶುಕ್ರವಾರ ನಡೆದಿದೆ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಎಟಿಎಂ ಕೇಂದ್ರದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿ ಹೊತ್ತಿಕೊಂಡ ಪರಿಣಾಮ ಮೈಸೂರಿನ ಪಾರಂಪರಿಕ ಅರಮನೆಯ ದ್ವಾರದ ಕಟ್ಟಡಕ್ಕೆ ಹಾನಿಯಾಗಿದೆ.
ಇದೇ ವೇಳೆ ರೂ.4 ಲಕ್ಷಕ್ಕೂ ಅಧಿಕ ಹಣ, 5ಲಕ್ಷಕ್ಕೂ ಹೆಚ್ಚಿನ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದೆ. ಮೈಸೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಅರಮನೆ ವರಾಹ ದ್ವಾರದಲ್ಲಿ ಎಟಿಎಂ ಕೇಂದ್ರವನ್ನು ಸ್ಥಾಪಿಸಲಾಗಿತ್ತು. ಶುಕ್ರವಾರ ಬೆಳಗ್ಗೆ 6ಗಂಟೆ ಸುಮಾರಿಗೆ ಎಟಿಎಂಗೆ ಬೆಂಕಿ ಹೊತ್ತಿಕೊಂಡು ಈ ಅವಘಡ ಸಂಭವಿಸಿದೆ.
ಬೆಂಕಿಯ ಕೆನ್ನಾಲಿಗೆ ಟಿಕೆಟ್ ಕೌಂಟರ್ ಬಳಿ ಹಾಗೂ ಪೊಲೀಸರ ವಿಶ್ರಾಂತಿ ಕೊಠಡಿಗೂ ವ್ಯಾಪಿಸ ತೊಡಗಿತ್ತು. ಈ ವೇಳೆ ಹೊಗೆಯಾಡುತ್ತಿದ್ದುದನ್ನು ಸ್ಥಳೀಯರು ಹಾಗೂ ಭದ್ರತಾ ಸಿಬ್ಬಂದಿಗಳು ಗಮನಿಸಿ ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯ ಆರಂಭಿಸಿದ್ದಾರೆ.
ಬೆಂಕಿ ಅವಘಡ ಉಂಟಾದ ಹಿನ್ನಲೆಯಲ್ಲಿ ಇದೀಗ ಟಿಕೆಟ್ ಕೌಂಟರ್ ಸ್ಥಳವನ್ನು ಬದಲಿಸಲಾಗಿದೆ. ಅಗ್ನಿ ಆಕಸ್ಮಿಕದಿಂದಾಗಿ ಗಣಪತಿ ದೇಗುಲಕ್ಕೆ ಯಾವುದೇ ರೀತಿಯ ಹಾನಿಯಾಗಿಲ್ಲ. ದೇಗುಲಕ್ಕೆ ಪ್ರತೀನಿತ್ಯ ನೂರಾರು ಭಕ್ತರು ಭೇಟಿ ನೀಡುತ್ತಿದ್ದು. ದೇಗುಲದಲ್ಲಿ ಎಂದಿನಂತೆ ಪೂಜಾ ವಿಧಿವಿಧಾನಗಳು ಮುಂದುವರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


