ಬೆಂಗಳೂರು: ಪ್ರೇಮ ವೈಫಲ್ಯದಿಂದ ಮನನೊಂದು ಟೆಕ್ಕಿ ಆತ್ಮಹತ್ಯೆಗೆ ಶರಣು
ಸಾಫ್ಟ್ ವೇರ್ ಇಂಜಿನಿಯರ್ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ನಿವಾಸಿ ಸುನೀಲ್ ಕುಮಾರ್ ಎಂಬುವರು ಪ್ರೇಮ ವೈಫಲ್ಯದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ...

Published On :
ಬೆಂಗಳೂರು: ಸಾಫ್ಟ್ ವೇರ್ ಇಂಜಿನಿಯರ್ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ನಿವಾಸಿ ಸುನೀಲ್ ಕುಮಾರ್ ಎಂಬುವರು ಪ್ರೇಮ ವೈಫಲ್ಯದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಗರದ ಕೋರಮಂಗಲ ಖಾಸಗಿ ಕಂಪನಿ ಒರೆಕಲ್ ಕೆಲಸ ಮಾಡುತ್ತಿದ್ದ ಸುನೀಲ್ ಕುಮಾರ್ ಕಳೆದ ಒಂದು ವರ್ಷದಿಂದ ಸಹೋದ್ಯೋಗಿ ಟೆಕ್ಕಿಯನ್ನು ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ.
ಕಳೆದ ಮೂರು ತಿಂಗಳಿನಿಂದ ಸುನೀಲ್ ಪ್ರೇಯಸಿಗೆ ಪ್ರೇಮ ನಿವೇದನೆ ಮಾಡುತ್ತಾ ಬಂದಿದ್ದರು. ಆಕೆ ಅದನ್ನು ತಿರಸ್ಕರಿಸುತ್ತಾ ಬಂದಿದ್ದಳು. ಕಳೆದ ರಾತ್ರಿ ತನ್ನ ಪ್ರೇಯಸಿಯನ್ನು ಸ್ನೇಹಿತನೊಬ್ಬನ ಮೂಲಕ ಮಾತುಕತೆಗೆ ಕರೆದಿದ್ದನು ಎನ್ನಲಾಗಿದೆ. ಈ ವೇಳೆ ಆಕೆ ತಾನು ಇನ್ನೊಬ್ಬರನ್ನು ಪ್ರೀತಿಸುತ್ತಿರುವುದಾಗಿ ಹೇಳಿದ್ದು ಇದರಿಂದ ಮನನೊಂದು ಸ್ನೇಹಿತನ ರೂಂನಲ್ಲೇ ಸುನೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruಆತ್ಮಹತ್ಯೆtechieಟೆಕ್ಕಿಸುನೀಲ್ ಕುಮಾರ್commits suicidesunil kumarlove failureಪ್ರೇಮ ವೈಫಲ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


