ರಜನೀಕಾಂತ್- ಪ್ರಧಾನಿ ಮೋದಿ ಭೇಟಿ ಬಗ್ಗೆ ನನಗೆ ಮಾಹಿತಿಯಿಲ್ಲ: ವೆಂಕಯ್ಯ ನಾಯ್ಡು
ನಟ ರಜನಿಕಾಂತ್ ಅವರು ಬಿಜೆಪಿಗೆ ಸೇರುತ್ತಾರೆ, ಮೋದಿ ಅವರನ್ನು ಭೇಟಿ ಆಗುತ್ತಾರೆ ಎಂಬುದರ ಕುರಿತು ನನಗೆ ಮಾಹಿತಿ ಇಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ...

Published On :
ಬೆಂಗಳೂರು: ನಟ ರಜನಿಕಾಂತ್ ಅವರು ಬಿಜೆಪಿಗೆ ಸೇರುತ್ತಾರೆ, ಮೋದಿ ಅವರನ್ನು ಭೇಟಿ ಆಗುತ್ತಾರೆ ಎಂಬುದರ ಕುರಿತು ನನಗೆ ಮಾಹಿತಿ ಇಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಜನೀಕಾಂತ್ ದೊಡ್ಡ ನಟ, ಮೋದಿ ಅವರು ಬಹುದೊಡ್ಡ ನಾಯಕ, ಒಂದು ವೇಳೆ ಅವರು ಭೇಟಿ ಮಾಡಲು ಬಯಸಿದರೇ ಅದರಲ್ಲಿ ಯಾವುದೇ ತೊಂದರೆಯಿಲ್ಲ ಎಂದು ಹೇಳಿದ್ದಾರೆ.
ತಮಿಳುನಾಡಿನಲ್ಲಿ ದಿನಕ್ಕೊಂದು ರಾಜಕೀಯ ವಿದ್ಯಮಾನ ನಡೆಯುತ್ತಿದೆ. ಅಲ್ಲಿನ ರಾಜಕೀಯದಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ’ ಎಂದು ಸಚಿವ ವೆಂಕಯ್ಯ ನಾಯ್ಡು ಹೇಳಿದರು.
ಬಿಜೆಪಿ ತಮಿಳುನಾಡಿನಲ್ಲಿ ಹವಾ ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಎಐಎಡಿಎಂಕೆ ಪಕ್ಷ ವಿಭಜನೆಯಲ್ಲಿ ಬಿಜೆಪಿ ಪಾತ್ರದ ಬಗ್ಗೆ ಭಾರಿ ಚರ್ಚೆ ನಡೆದು ತಣ್ಣಗಾಗಿತ್ತು. ಈ ನಡುವೆ ಪಕ್ಷದ ಒಂದು ಬಣದ ನಾಯಕ, ಮಾಜಿ ಸಿಎಂ ಪನ್ನೀರ್ ಸೆಲ್ವಂ ಅವರು ನರೇಂದ್ರ ಮೋದಿ, ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು ಮುಂದಿನ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಜತೆ ಮಾತನಾಡಿದ್ದು ಕುತೂಹಲ ಕೆರಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


