ವಿಧಾನ ಸೌಧದ 2 ಮಹಡಿ ನಮಗೆ ನೀಡಿ: ಸಚಿವಾಲಯ ಕೋರಿಕೆ
ವಿಧಾನಸೌಧದ ಮೊದಲ ಮತ್ತು ಎರಡನೇ ಮಹಡಿಗಳ ಸುಪರ್ದಿಯನ್ನು ತಮಗೆ ವಹಿಸುವಂತೆ ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ..

Published On :
ಬೆಂಗಳೂರು: ವಿಧಾನಸೌಧದ ಮೊದಲ ಮತ್ತು ಎರಡನೇ ಮಹಡಿಗಳ ಸುಪರ್ದಿಯನ್ನು ತಮಗೆ ವಹಿಸುವಂತೆ ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಕೇಳಿದ್ದಾರೆ.
ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಶಂಕರಮೂರ್ತಿ,ಇವೆರಡೂ ಮಹಡಿಗಳಲ್ಲಿ ಕೆಲವು ಭಾಗಗಳನ್ನು ಮಾತ್ರ ನಮ್ಮ ವಶಕ್ಕೆ ಕೊಡುವಂತೆ ಕೇಳಿದ್ದೇವೆ ಎಂದು ಹೇಳಿದ್ದಾರೆ. ಬಹಳ ಹಿಂದಿನಿಂದಲೂ ಈ ಪ್ರಯತ್ನ ನಡೆಯುತ್ತಿದೆ, ಆದರೆ ಈಗ ನಾವು ಮನವಿ ಮಾಡಿದಾಗ ಮಾತ್ರ ವಿವಾದ ಸೃಷ್ಟಿಯಾಗುತ್ತಿದೆ ಎಂದು ಶಂಕರಮೂರ್ತಿ ತಿಳಿಸಿದ್ದಾರೆ.
ವಿಧಾನಪರಿಷತ್ತಿನ ಸಿಬ್ಬಂದಿಗೆ ಮೂರನೇ ಮಹಡಿಯಲ್ಲಿ ಕೊಠಡಿ ನೀಡಲಾಗಿದೆ. ಅಧಿವೇಶನದ ಸಂದರ್ಭದಲ್ಲಿ ಸಿಬ್ಬಂದಿಗೆ ಕಾರ್ಯ ನಿರ್ವಹಿಸಲು ಕಷ್ಟವಾಗುತ್ತಿದೆ, ನಮ್ಮ ಅಧೀನದಲ್ಲಿರುವ ಕೊಠಡಿಗಳ ನಿರ್ವಹಣೆ ಜವಾಬ್ದಾರಿ ಲೋಕೋಪಯೋಗಿ ಇಲಾಖೆ ಸೇರಿದಂತೆ ಯಾರಿಗೆ ಬೇಕಾದರೂ ಕೊಡಬಹುದು. ಕಟ್ಟಡದಲ್ಲಿ ಬದಲಾವಣೆ ಮಾಡಬೇಕಿದ್ದರೆ, ನಮ್ಮ ಅನುಮತಿ ಕಡ್ಡಾಯ’ ಎಂದೂ ಅವರು ತಿಳಿಸಿದ್ದಾರೆ.
ಸಂಸತ್ತು ಮತ್ತು ವಿವಿಧ ರಾಜ್ಯಗಳಲ್ಲಿ ವಿಧಾನಸಭೆಗಳ ಉಸ್ತುವಾರಿ ಹೊಣೆಯನ್ನು ಸಚಿವಾಲಯಗಳೇ ವಹಿಸಿಕೊಂಡಿವೆ ಹೀಗಾಗಿ ವಿಧಾನಸಭೆ ಉಸ್ತುವಾರಿಯನ್ನು ನಮಗೆ ನೀಡುವಂತೆ ಕೇಳುವುದರಲ್ಲಿ ತಪ್ಪಿಲ್ಲ ಎಂದು ಹೇಳಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ. ಅವರ ಜೊತೆ ಚರ್ಚಿಸುವುದಾಗಿ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Vidhana Soudhaವಿಧಾನಸೌಧಲೋಕೋಪಯೋಗಿ ಇಲಾಖೆಡಿಎಚ್ ಶಂಕರಮೂರ್ತಿD H ShankaramurthyPublic Works Departmentwo floorsಎರಡು ಮಹಡಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


