ಕಲಬುರ್ಗಿ ಬಳಿ ಕಾರು ಪಲ್ಟಿಯಾಗಿ 3 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು
ನಗರದ ಹೊರವಲಯದ ಸೇಡಂ ರಸ್ತೆಯಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟ....

Published On :
ಕಲಬುರ್ಗಿ: ನಗರದ ಹೊರವಲಯದ ಸೇಡಂ ರಸ್ತೆಯಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟ ದಾರುಣ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.
ಗೀತನಗರದಿಂದ ವಾಪಸ್ ಕಲಬುರ್ಗಿಗೆ ಬರುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರ ತಪ್ಪಿ ತಲೆಕೆಳಗಾಗಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವಿದ್ಯಾರ್ಥಿಗಳನ್ನು ಶರಣಬಸವ(22), ಪ್ರತೀಕ್(22) ಹಾಗೂ ಪ್ರತ್ಯಕ್ಷ(22) ಎಂದು ಗುರುತಿಸಲಾಗಿದೆ. ಈ ವಿದ್ಯಾರ್ಥಿಗಳು ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಓದುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಕಲಬುರ್ಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಅಪಘಾತaccidentkalaburagiಕಲಬುರ್ಗಿThree engineering students killedಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


