ಕೊಚ್ಚಿಹೋದ ಶಾಂತಕುಮಾರ್ ಪತ್ತೆಯಾಗದ ಹಿನ್ನೆಲೆಯಲ್ಲಿ ಶೋಧ ಕಾರ್ಯ ಸ್ಥಗಿತ
ಕಳೆದ ಶನಿವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ರಾಜಕಾಲುವೆಯಲ್ಲಿ ಕೊಚ್ಚಿಹೋದ ಕಾರ್ಮಿಕ ಶಾಂತಕುಮಾರ್...

Published On :
ಬೆಂಗಳೂರು: ಕಳೆದ ಶನಿವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ರಾಜಕಾಲುವೆಯಲ್ಲಿ ಕೊಚ್ಚಿಹೋದ ಕಾರ್ಮಿಕ ಶಾಂತಕುಮಾರ್ ಐದು ದಿನ ಕಳೆದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಶೋಧ ಕಾರ್ಯ ಸ್ಥಗಿತಗೊಳಿಸಲಾಗಿದೆ ಎಂದು ಬಿಬಿಎಂಪಿ ಮೇಯರ್ ಜಿ.ಪದ್ಮಾವತಿ ಅವರು ಬುಧವಾರ ಹೇಳಿದ್ದಾರೆ.
ಕುರುಬರಹಳ್ಳಿ ಬಳಿಯ ಜೆ.ಸಿ.ನಗರ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿರುವ ಶಾಂತಕುಮಾರ್ ಅವರಿಗಾಗಿ ಕಳೆದ ಐದು ದಿನಗಳಿಂದ ನಿರಂತರವಾಗಿ ಹುಡುಕಾಟ ನಡೆಸಲಾಗುತ್ತಿದೆ. ಆದರೆ, ಇದುವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ. ಹೀಗಾಗಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೇಯರ್ ತಿಳಿಸಿದ್ದಾರೆ. ಅಲ್ಲದೆ ಶಾಂತಕುಮಾರ್ ಕುಟುಂಬಕ್ಕೆ 10 ಲಕ್ಷ ರುಪಾಯಿ ಪರಿಹಾರ ಘೋಷಿಸಿದ್ದಾರೆ.
ವಿಪತ್ತು ಕ್ರಿಯಾ ತಂಡ, ಅಗ್ನಿಶಾಮಕ ದಳ, ಪೊಲೀಸರು ಮತ್ತು ನಗರ ಪಾಲಿಕೆ ರಕ್ಷಣಾ ತಂಡ ಶಾಂತಕುಮಾರ್ ಹುಡುಕಾಟದಲ್ಲಿ ತೊಡಗಿತ್ತು.
ರಾಜಾಕಾಲುವೆಯಲ್ಲಿ ಕೊಚ್ಚಿ ಹೋಗಿರುವ ಶಾಂತಕುಮಾರ್ ಬಿಬಿಎಂಪಿ ಗುತ್ತಿಗೆದಾರ ಬಸವರಾಜ್ ಅವರ ಸೋದರಳಿಯ. ಕಾರ್ಮಿಕರಿಗೆ ಕೂಲಿ ನೀಡಿ ಮನೆಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ರಾಜಕಾಲುವೆಯ ಒಳಹರಿವು ಹೆಚ್ಚಾಗಿದ್ದರಿಂದ ಸುಳಿಯಲ್ಲಿ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengalurumissing BBMP workercalls of search operationsಬಿಬಿಎಂಪಿ ಕಾರ್ಮಿಕ ನಾಪತ್ತೆಕಾರ್ಯಾಚರಣೆ ಸ್ಥಗಿತ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


