ಮೈಸೂರು ಕೋರ್ಟ್ ಸ್ಫೋಟ ಪ್ರಕರಣ: ಮೂವರ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿದ ಎನ್ಐಎ
ಕಳೆದ ವರ್ಷ ಮೈಸೂರು ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ಸಾರ್ವಜನಿಕ ಶೌಚಾಲಯದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ...

Published On :
ಬೆಂಗಳೂರು: ಕಳೆದ ವರ್ಷ ಮೈಸೂರು ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ಸಾರ್ವಜನಿಕ ಶೌಚಾಲಯದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬುಧವಾರ ಮೂವರ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿದೆ.
ಉಗ್ರ ಕೃತ್ಯಗಳಲ್ಲಿ ಭಾಗಿಯಾದ ಮತ್ತು ನ್ಯಾಯಾಂಗಕ್ಕೆ ಬೆದರಿಕೆ ಹಾಕಿದ ಆರೋಪದ ಮೇಲೆ ಬೇಸ್ ಮೂವ್ಮೆಂಟ್ ಸಂಘನೆಯ ಅಬ್ಬಾಸ್ ಅಲಿ, ಎಂ.ಸ್ಯಾಮ್ಸನ್ ಕರೀಮ್ ರಾಜಾ ಹಾಗೂ ಎಸ್ ದಾವೂದ್ ಸುಲೇಮಾನ್ ವಿರುದ್ಧ ಎನ್ಐಎ ಇಂದು ಬೆಂಗಳೂರಿನ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ.
ಆರೋಪಿಗಳು ಒಂದು ದೊಡ್ಡ ದಾಳಿಯ ಸಂಚಿನ ಭಾಗವಾಗಿ ಆಗಸ್ಟ್ 1, 2016ರಂದು ಮೈಸೂರಿನ ನ್ಯಾಯಾಲಯದ ಹಿಂಬದಿಯಲ್ಲಿರುವ ಶೌಚಾಲಯದಲ್ಲಿ ಬಾಂಬ್ ಸ್ಫೋಟಿಸಿದ್ದಾರೆ ಎಂದು ಎನ್ ಐಎ ತನ್ನ ಚಾರ್ಜ್ ಶೀಟ್ ನಲ್ಲಿ ಆರೋಪಿಸಿದೆ.
ಬಾಂಬ್ ಸ್ಫೋಟದಿಂದಾಗಿ ಶೌಚಾಲಯದ ಕಿಟಕಿ, ಬಾಗಿಲುಗಳು ಧ್ವಂಸಗೊಂಡಿತ್ತು. ದಕ್ಷಿಣ ಭಾರತದಲ್ಲಿ ಸಕ್ರಿಯವಾಗಿರುವ ಉಗ್ರ ಸಂಘಟನೆ ಅಲ್-ಉಮಾ 'ಬೇಸ್ ಮೂಮೆಂಟ್' ಎಂದು ತನ್ನ ಹೆಸರನ್ನು ಬದಲಾವಣೆ ಮಾಡಿಕೊಂಡಿದೆ. ಈ ಅಲ್-ಉಮಾ ಸಂಘಟನೆ ಅಲ್ ಖೈದಾ ಉಗ್ರ ಸಂಘಟನೆಯ ಒಂದು ಭಾಗವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


