ಬೆಳ್ಳಂದೂರು ಕೆರೆ ವ್ಯಾಪ್ತಿಯಲ್ಲಿರುವ 114 ಕಾರ್ಖಾನೆಗಳು ಸ್ಥಗಿತಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ
ಬೆಳ್ಳಂದೂರು ಕೆರೆ ವ್ಯಾಪ್ತಿಯ 114 ಕಾರ್ಖಾನೆಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶನ ನೀಡಿದೆ. 1974 ರ ಮಾಲಿನ್ಯ ..

Published On :
ಬೆಂಗಳೂರು: ಬೆಳ್ಳಂದೂರು ಕೆರೆ ವ್ಯಾಪ್ತಿಯ 114 ಕಾರ್ಖಾನೆಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶನ ನೀಡಿದೆ. 1974 ರ ಮಾಲಿನ್ಯ ನಿಯಂತ್ರಣ ಹಾಗೂ ತಡೆಗಟ್ಟುವಿಕೆ ಕಾಯ್ದೆ ಸೆಕ್ಷನ್ 33(ಎ) ಅಡಿಯಲ್ಲಿ ಈ ಆದೇಶವನ್ನು ಜಾರಿಗೊಳಿಸಲಾಗಿದೆ.
ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಏಪ್ರಿಲ್ 10 ರಂದು ನೀಡಿದ ಆದೇಶದಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಈ ಕ್ರಮ ಕೈಗೊಂಡಿದೆ. ಈ ಪ್ರದೇಶದಲ್ಲಿರುವ 114 ಕಾರ್ಖಾನೆಗಳಿಗೆ ಬೆಸ್ಕಾಂ ಈಗಾಗಲೇ ವಿದ್ಯುತ್ ಸಂಪರ್ಕ ನಿಲ್ಲಿಸಿದೆ.
ಬೆಸ್ಕಾಂ ವಿದ್ಯುತ್ ಸ್ಥಗಿತಗೊಳಿಸಿದ್ದು, ಆದರೇ ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಧಿಕ್ಕರಿಸಿ ಜನರೇಟರ್ ಬಳಸಿ ಕಾರ್ಖಾನೆ ನಡೆಸಿದರೇ ಕಾಯ್ದೆಯಲ್ಲಿರುವ ಕಾನೂನುಗಳ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಸ್ಥಗಿತShutBellandur lakeಬೆಳ್ಳಂದೂರು ಕೆರೆState Pollution Control Board114 industries114 ಕೈಗಾರಿಕೆಗಳುರಾಜ್ಯ ವಾಯು ನಿಯಂತ್ರಣ ಮಂಡಳಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


