ರಾಜ್ಯ

ಬೆಳಗಾವಿಯಲ್ಲಿ ಜೈ ಮಹಾರಾಷ್ಟ್ರ ಕೂಗು: 300ಕ್ಕೂ ಹೆಚ್ಚು ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲು

ಮರಾಠಿ ಭಾಷೆಯಲ್ಲಿಯೇ ದಾಖಲೆಗಳನ್ನು ನೀಡಬೇಕೆಂದು ಆಗ್ರಹಿಸಿ ಎಂಇಎಸ್ ಕಾರ್ಯಕರ್ತರು ಗುರುವಾರ ನಗರದಲ್ಲಿ ಮಹಾರಾಷ್ಟ್ರ ರಾಜ್ಯದ ಪರ ಘೋಷಣೆ ಕೂಗಿ, ಗಡಿ ವಿವಾದ ಕೆದಕಿ...

ಬೆಳಗಾವಿಯಲ್ಲಿ ಜೈ ಮಹಾರಾಷ್ಟ್ರ ಕೂಗು: 300ಕ್ಕೂ ಹೆಚ್ಚು ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲು
ಬೆಳಗಾವಿಯಲ್ಲಿ ಜೈ ಮಹಾರಾಷ್ಟ್ರ ಕೂಗು: 300ಕ್ಕೂ ಹೆಚ್ಚು ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲು
Published On :
ಬೆಳಗಾವಿ: ಮರಾಠಿ ಭಾಷೆಯಲ್ಲಿಯೇ ದಾಖಲೆಗಳನ್ನು ನೀಡಬೇಕೆಂದು ಆಗ್ರಹಿಸಿ ಎಂಇಎಸ್ ಕಾರ್ಯಕರ್ತರು ಗುರುವಾರ ನಗರದಲ್ಲಿ ಮಹಾರಾಷ್ಟ್ರ ರಾಜ್ಯದ ಪರ ಘೋಷಣೆ ಕೂಗಿ, ಗಡಿ ವಿವಾದ ಕೆದಕಿ ಪ್ರತಿಭಟನಾ ರ್ಯಾಲಿ ನಡೆಸಿದ್ದಾರೆ. 
ಬೆಳಗಾವಿ ನಗರದಲ್ಲಿ ನಡೆಸಿದ ಪ್ರತಿಭಟನಾ ರ್ಯಾಲಿಯಲ್ಲಿ ಪೊಲೀಸರು ವಿಧಿಸಿದ್ದ ಷರತನ್ನು ಉಲ್ಲಂಘಿಸಿ ಗಡಿ ವಿವಾದವನ್ನು ಕೆದಕಿದ ಹಿನ್ನಲೆಯಲ್ಲಿ 300ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣಗಳು ದಾಖಲಾಗಿದೆ. 
ಬೆಳಗಾವಿ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶ ಹಿನ್ನಲೆಯಲ್ಲಿ ಮಹಾರಾಷ್ಟ್ರದ ಸಚಿವ ದಿವಾಕರ ರಾವತೆ ಗಡಿ ಪ್ರವೇಶ ಮುನ್ನವೇ ವಾಪಸ್ ಕೊಲ್ಹಾಪುರಕ್ಕೆ ತೆರಳಿದರು. ಶಾಸಕರಾದ ಸಂಭಾಜಿ ಪಾಟೀಲ ಮತ್ತು ಅರವಿಂದ ಪಾಟೀಲ ಸೇರಿದಂತೆ ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಎಲ್ಲಾ ಕಾರ್ಯಕರ್ತರು ಜೈ ಮಹಾರಾಷ್ಟ್ರ ಘೋಷಣೆ ಕೂಗಿ, ಕನ್ನಡಿಗರು ಹಾಗೂ ಕರ್ನಾಟಕ ಸರ್ಕಾರದ ವಿರುದ್ಧ ಸೆಡ್ಡು ಹೊಡೆದರು. 
ಜಿಲ್ಲಾಧಿಕಾರಿ ಎನ್. ಜಯರಾಂ ಅವರು ಮನವಿ ಸ್ವೀಕರಿಸಲು ಪ್ರತಿಭಟನಾಕಾರರ ಬಳಿ ತೆರಳುತ್ತಿದ್ದಂತೆಯೇ ಏರುಧ್ವನಿಯಲ್ಲೇ ಎಲ್ಲರೂ ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿದರು. 
ಶಾಂತ ರೀತಿಯಿಂದ ಪ್ರತಿಭಟನಾ ರ್ಯಾಗಿ ಮಾಡುವುದಾಗಿ ಅನುಮತಿ ಪಡೆದಿದ್ದ ಎಂಇಎಸ್ ಷರತ್ತು ಉಲ್ಲಂಘಿಸಿರುವ ಹಿನ್ನಲೆಯಲ್ಲಿ ಕಲಂ 153 (ಎ), 188 ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ರ್ಯಾಲಿಯ ವಿಡಿಯೋ ದೃಶ್ಯಗಳನ್ನು ವೀಕ್ಷಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ಅಮರನಾಥ ರೆಡ್ಡಿ ಅವರು ತಿಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.