ಬಂಧಿತ ಪಾಕ್ ಮೂಲದವರ ಕಾನೂನು ಬಾಹಿರ ಕೃತ್ಯಗಳ ಬಗ್ಗೆ ಮಾಹಿತಿ ಇಲ್ಲ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಮೂವರು ಪಾಕ್ ಪ್ರಜೆಗಳು ಕಾನೂನು ಬಾಹಿರ ಕೃತ್ಯಗಳಲ್ಲಿ...

Published On :
ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಮೂವರು ಪಾಕ್ ಪ್ರಜೆಗಳು ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರು ಪಾಸ್ ಪೋರ್ಟ್ ಮತ್ತು ವೀಸಾ ಇಲ್ಲದೇ ಕತಾರ್ ಮತ್ತು ಪಾಕಿಸ್ತಾನದಿಂದ ಬಂದವರಾಗಿದ್ದು ಪ್ರೀತಿ, ಪ್ರೇಮ ಮದುವೆ ವಿಚಾರ ಹೊರತು ಪಡಿಸಿ ಬೇರೆ ಯಾವುದೇ ವಿಚಾರಗಳು ಬಂಧಿತರಿಂದ ತಿಳಿದುಬಂದಿಲ್ಲ. ಅಲ್ಲದೆ ಬೇರೆ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಬಗ್ಗೆ ಸುಳಿವು ಸಿಕ್ಕಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇರಳ ಮೂಲದ ಸಿಹಾಬ್ ನ ನೆರವಿನಿಂದಲೇ ನಗರದಲ್ಲಿ ನಜ್ಮಾ ಸಮೀರಾ ಮತ್ತು ಜಿನಬ್ ಕಿರಣ್ ಇಬ್ಬರೂ ನಕಲಿ ಗುರುತಿನ ಚೀಟಿಗಳನ್ನು ಪಡೆದು ನೆಲೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


