ಮೈಸೂರು: ಭಕ್ತರಿಂದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿಜಿಗೆ ವಜ್ರ ಖಚಿತ ಕಿರೀಟ ಸಮರ್ಪಣೆ
ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ 75ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಭಕ್ತರು ವಜ್ರ ಖಚಿತ ಚಿನ್ನದ ಕಿರೀಟವನ್ನು...
Published On :
ಮೈಸೂರು: ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ 75ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಭಕ್ತರು ವಜ್ರ ಖಚಿತ ಚಿನ್ನದ ಕಿರೀಟವನ್ನು ಸಮರ್ಪಿಸಿದ್ದಾರೆ.
ಕಿರಿಯ ಸ್ವಾಮೀಜಿ ವಿಜಯಾನಂದ ತೀರ್ಥರು ಕಿರೀಟವನ್ನು ಶ್ರೀ ಗಣಪತಿ ಸಚ್ಚಿದಾನದ ಸ್ವಾಮೀಜಿ ಅವರಿಗೆ ಅರ್ಪಿಸಿದರು. ಈ ವೇಳೆ ಚಿನ್ನದ ಸಿಂಹಾಸನದಲ್ಲಿ ಆಸೀನರಾಗಿದ್ದ ಸ್ವಾಮೀಜಿ ಭಕ್ತರನ್ನು ಆಶೀರ್ವದಿಸಿದರು.
ಪ್ರತಿಯೊಬ್ಬ ಭಾರತೀಯನು ಶಾಂತಿ, ಪ್ರೀತಿ, ಸತ್ಯ ಹಾಗೂ ಧರ್ಮದ ಮಂತ್ರವನ್ನು ಪಠಿಸಬೇಕು ಎಂದು ಸ್ವಾಮೀಜಿ ಕರೆ ನೀಡಿದರು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೂಡ ಈ ವೇಳೆ ಹಾಜರಿದ್ದರು. ಸ್ವಾಮೀಜಿ ಅವರು ಹುಟ್ಟು ಹಬ್ಬಕ್ಕೆ ಫಡ್ನವೀಸ್ ಹಾಜರಾಗಿದ್ದು ಎಲ್ಲರಲ್ಲಿ ಆಶ್ಚರ್ಯ ಮೂಡಿಸಿತ್ತು.
ಈ ವೇಳೆ ಮಾತನಾಡಿದ ಫಡ್ನವೀಸ್ ಸಮಾಜದಲ್ಲಿನ ತಾರತಮ್ಯ ಅಂತ್ಯಗೊಳ್ಳಬೇಕು. ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡಲು ಇದು ಅತ್ಯುತ್ತಮ ಸಮಯ ಎಂದು ಕರೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Devendra FadnavisಮೈಸೂರುMysurudiamond-studded crownSri Ganapathi Sachidananda Swamijiಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ದೇವೇಂದ್ರ ಫಡ್ನವೀಸ್ವಜ್ರ ಖಚಿತ ಕಿರೀಟ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

