ಚಿತ್ರದುರ್ಗ: ಮಾನವ ರಹಿತ ಯುದ್ಧ ವಿಮಾನ ಪರೀಕ್ಷಾ ಕೇಂದ್ರ ಉದ್ಘಾಟನೆ!
ಭಾರತೀಯ ಸೇನೆಯ ಸಾಮರ್ಥ್ಯವನ್ನು ವೃದ್ಧಿಸಬಲ್ಲ ಬಹು ನಿರೀಕ್ಷಿತ ಮಾನವ ರಹಿತ ಯುದ್ಧ ವಿಮಾನ ಪರೀಕ್ಷಾ ಕೇಂದ್ರವನ್ನು ಭಾನುವಾರ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ಉದ್ಘಾಟನೆ ಮಾಡಿದ್ದಾರೆ.

ಚಿತ್ರದುರ್ಗ: ಭಾರತೀಯ ಸೇನೆಯ ಸಾಮರ್ಥ್ಯವನ್ನು ವೃದ್ಧಿಸಬಲ್ಲ ಬಹು ನಿರೀಕ್ಷಿತ ಮಾನವ ರಹಿತ ಯುದ್ಧ ವಿಮಾನ ಪರೀಕ್ಷಾ ಕೇಂದ್ರವನ್ನು ಭಾನುವಾರ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ಉದ್ಘಾಟನೆ ಮಾಡಿದ್ದಾರೆ.
ಕರ್ನಾಟಕದ ಚಿತ್ರದುರ್ಗದ ಚಳ್ಳಕೆರೆಯಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಸ್ಥಾಪಿಸಿರುವ ಮಾನವ ರಹಿತ (ಯುಎವಿ) ಯುದ್ಧ ವಿಮಾನಗಳ ಪರೀಕ್ಷಾರ್ಥ ವಾಯುನೆಲೆಯನ್ನು (ಎಟಿಆರ್) ಕೇಂದ್ರ ರಕ್ಷಣಾ ಸಚಿವ ಅರುಣ್ ಜೇಟ್ಲಿ ಇಂದು ಉದ್ಘಾಟಿಸಿದರು. ಸುಮಾರು 4,290 ಎಕರೆ ಪ್ರದೇಶದಲ್ಲಿ ಡಿಆರ್‌ಡಿಒ ಅತ್ಯಾಧುನಿಕ ತಂತ್ರಜ್ಞಾನಗಳ ಮೂಲಕ ಮಾನವರಹಿತ ಯುದ್ಧ ವಿಮಾನಗಳನ್ನು ಪರೀಕ್ಷಾರ್ಥ ಹಾರಾಟ ನಡೆಸಲು ಸುಸಜ್ಜಿತ ವಾಯುನೆಲೆ ನಿರ್ಮಿಸಿದ್ದು, ಇದು ವಿಮಾನಗಳ ಟೇಕಾಫ್, ಲ್ಯಾಂಡಿಂಗ್ ಮತ್ತು ಹಾರಾಟ ಸಾಮರ್ಥ್ಯವನ್ನು ಪರೀಕ್ಷೆಗೆ ಒಡ್ಡುವ ಕೇಂದ್ರವಾಗಿದೆ.
ಸುಮಾರು 290 ಕೋಟಿ ರು. ವೆಚ್ಚದಲ್ಲಿ ಈ ಮಹತ್ವಾಕಾಂಕ್ಷೆ ಕೇಂದ್ರವನ್ನು ಡಿಆರ್ ಡಿಒ ಸಿದ್ಧಪಡಿಸಿದ್ದು, ಚಿತ್ರದುರ್ಗ ಜಿಲ್ಲಾ ಕೇಂದ್ರದಿಂದ 35 ಕಿಮೀ ದೂರದಲ್ಲಿದೆ. ವಿಶ್ವದ ಮುಂದುವರೆದ ದೇಶಗಳಲ್ಲಿರುವಂತೆ ನಮ್ಮದೇ ಸ್ವದೇಶಿ ನಿರ್ಮಿತ ಮಾನವ ರಹಿತ ಯುದ್ಧ ವಿಮಾನ ಹೊಂದುವ ಕನಸಿಗೆ ಇಂದು ಮೊದಲ ಹೆಜ್ಜೆಯನ್ನಿರಿಸಿದ್ದು, ಕೆಲವೇ ವರ್ಷಗಳಲ್ಲಿ ಈ ಮಹತ್ವಾಕಾಂಕ್ಷೆಯ ಕನಸು ನನಸಾಗಲಿದೆ.
ಇನ್ನು ಎಟಿಆರ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಸಚಿವ ಅರುಣ್ ಜೇಟ್ಲಿ, "ಭಾರತ ಭೌಗೋಳಿಕವಾಗಿ ಸಮಸ್ಯೆಯ ಪ್ರದೇಶದಲ್ಲಿದೆ. ನಮ್ಮ ನೆರೆಹೊರೆಯ ದೇಶಗಳು ಕಳೆದ 7 ದಶಕಗಳಿಂದ ದೇಶದ ಭದ್ರತೆಗೆ ಕಂಟವಾಗಿವೆ. ಇಂತಹ ಪರಿಸ್ಥಿತಿಯಲ್ಲಿ ಎಟಿಆರ್ ಕೇಂದ್ರ ಪ್ರಸ್ತುತ ಭಾರತಕ್ಕೆ ಮಹತ್ವದ್ದಾಗಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


