ರಾಜ್ಯ

ಸಚಿವ ಅನಿಲ್ ದಾವೆ ಶಾಪದಿಂದ ಸಾವನ್ನಪ್ಪಿದ್ದಾರೆ: ಸಚಿವ ಎ. ಮಂಜು

ಇತ್ತೀಚೆಗೆ ನಿಧನರಾದ ಕೇಂದ್ರ ಪರಿಸರ ಸಚಿವ ಅನಿಲ್ ದಾವೆ ಶಾಪದಿಂದ ಸಾವನ್ನಪ್ಪಿದ್ದಾರೆ ಎಂದು ಪಶು ಸಂಗೋಪನಾ ಇಲಾಖೆ ಸಚಿವ ಎ.ಮಂಜು...

ಸಚಿವ ಅನಿಲ್ ದಾವೆ ಶಾಪದಿಂದ ಸಾವನ್ನಪ್ಪಿದ್ದಾರೆ: ಸಚಿವ ಎ. ಮಂಜು
ಸಚಿವ ಎ.ಮಂಜು
Published On :
ಮೈಸೂರು: ಇತ್ತೀಚೆಗೆ ನಿಧನರಾದ ಕೇಂದ್ರ ಪರಿಸರ ಸಚಿವ ಅನಿಲ್ ದಾವೆ ಶಾಪದಿಂದ ಸಾವನ್ನಪ್ಪಿದ್ದಾರೆ ಎಂದು ಪಶು ಸಂಗೋಪನಾ ಇಲಾಖೆ ಸಚಿವ ಎ.ಮಂಜು ಹೇಳಿದ್ದಾರೆ. 
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾನೂನಿನಲ್ಲಿ ಅವರ ಪಾತ್ರ ಇರುವುದರಿಂದ ಅದರ ಶಾಪದಿಂದಾಗಿ ಅನಿಲ್ ದಾವೆ ನಿಧನರಾಗಿದ್ದಾರೆ ಎಂದು ತಿಳಿಸಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಅವರು ಧರಿಸುವ ಶೂ ಕೂಡ ಲೆದರ್ ಕೈಗಾರಿಕೆಯಲ್ಲಿ ದನಗಳ ಚರ್ಮದಿಂದ ತಯಾರಿಸಿದ್ದೇ ಆಗಿದೆ, ಆದರೆ ಹಸುವಿನ ಹಾಲನ್ನು ಮಾತ್ರ ಕುಡಿಯುತ್ತಾರೆ ಎಂದು ಹೇಳಿದ್ದಾರೆ.
ಕೇಂದ್ರಸರ್ಕಾರ ಈ ಕಾನೂನು ಜಾರಿಗೆ ತರುವ ಮುನ್ನ ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿಲ್ಲ. ಆದರೆ ಒಕ್ಕೂಟ ವ್ಯವಸ್ಥೆಯಲ್ಲಿ ಯಾವುದೇ ಒಂದು ನೀತಿ ನಿಯಮ ಜಾರಿಗೆ ತರುವ ಮುನ್ನ ಎಲ್ಲಾ ರಾಜ್ಯಗಳೊಂದಿಗೆ ಚರ್ಚಿಸುವ ಅವಶ್ಯಕತೆ ಇರುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ ನಂತರ ಕೇಂದ್ರ ಜಾರಿಗೆ ತಂದಿರುವ ಕಾನೂನಿನ ಬಗ್ಗೆ ತಮಗಿರುವ ಅಸಮಾಧಾನದ ಬಗ್ಗೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.