ಅಪ್ಪಾಜಿ ಹಾದಿಯಲ್ಲೇ ಅಮ್ಮ: ನಾರಾಯಣ ನೇತ್ರಾಲಯಕ್ಕೆ ಕಣ್ಣುಗಳ ದಾನ!
ಡಾ.ರಾಜ್ ಕುಮಾರ್ ಅವರ ಆಶಯದಂತೆ ಪಾರ್ವತಮ್ಮ ರಾಜ್ ಕುಮಾರ್ ಅವರ ಕಣ್ಣುಗಳನ್ನು ಕೂಡ ದಾನ ಮಾಡಲಾಗಿದ್ದು, ನಾರಾಯಣ ನೇತ್ರಾಲಯಕ್ಕೆ ಅವರ ಎರಡೂ ಕಣ್ಣುಗಳನ್ನು ದಾನ ಮಾಡಲಾಗಿದೆ.

ಬೆಂಗಳೂರು: ಡಾ.ರಾಜ್ ಕುಮಾರ್ ಅವರ ಆಶಯದಂತೆ ಪಾರ್ವತಮ್ಮ ರಾಜ್ ಕುಮಾರ್ ಅವರ ಕಣ್ಣುಗಳನ್ನು ಕೂಡ ದಾನ ಮಾಡಲಾಗಿದ್ದು, ನಾರಾಯಣ ನೇತ್ರಾಲಯಕ್ಕೆ ಅವರ ಎರಡೂ ಕಣ್ಣುಗಳನ್ನು ದಾನ ಮಾಡಲಾಗಿದೆ.
ದಿವಂಗತ ರಾಜ್ ಕುಮಾರ್ ಅವರಂತೆಯೇ ಇದೀಗ ಪತ್ನಿ ಹಾಗೂ ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಕೂಡ ಕಣ್ಣು ದಾನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾರಾಯಣ ನೇತ್ರಾಲಯದ ವೈದ್ಯರಾದ ಡಾ| ಭುಜಂಗ ಶೆಟ್ಟಿ ಅವರು ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿದ್ದಾರೆ.
78 ವರ್ಷ ವಯಸ್ಸಿನ ಪಾರ್ವತಮ್ಮ ಅವರು ಸಕ್ಕರೆ ಕಾಯಿಲೆ ಹಾಗೂ ರಕ್ತದೊತ್ತಡದಿಂದ ಆರೋಗ್ಯದಲ್ಲಿ ಏರುಪೇರಾಗಿ ಕಳೆದ 15 ದಿನಗಳಿಂದ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 4.40ರ ಸುಮಾರಿಗೆ ಅವರು ನಿಧನರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


