ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯ: ಪರೀಕ್ಷೆ ಮುಂದೂಡಿಕೆ
ಹಲವು ವಿದ್ಯಾರ್ಥಿ ಸಂಘಟನೆಗಳ ಬೇಡಿಕೆಗಳಿಗೆ ಮಣಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಈ ತಿಂಗಳು...

Published On :
ಬೆಂಗಳೂರು: ಹಲವು ವಿದ್ಯಾರ್ಥಿ ಸಂಘಟನೆಗಳ ಬೇಡಿಕೆಗಳಿಗೆ ಮಣಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಈ ತಿಂಗಳು ಆರಂಭವಾಗಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿದೆ.
ಮರುಮೌಲ್ಯಮಾಪನ ಫಲಿತಾಂಶವನ್ನು ತಡವಾಗಿ ಬಿಡುಗಡೆ ಮಾಡಿದ್ದನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರಿಂದ ವಿವಿ ಈ ತೀರ್ಮಾನ ಕೈಗೊಂಡಿದೆ.
ಮರುಮೌಲ್ಯಮಾಪನ ಫಲಿತಾಂಶ ತಡವಾದದ್ದರಿಂದ ಕೆಲವು ವಿದ್ಯಾರ್ಥಿಗಳು ಮುಂದಿನ ಮರು ಮೌಲ್ಯಮಾಪನ ಶುಲ್ಕದ ಜೊತೆಗೆ ಪರೀಕ್ಷಾ ಶುಲ್ಕಗಳನ್ನು ಪಾವತಿಸಬೇಕಾಗುತ್ತಿತ್ತು.
ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಕರಿಸಿದ್ದಪ್ಪ, ಅಂತಿಮ ಬಿಇ ವರ್ಷದ ಪರೀಕ್ಷೆಗಳು ಇದೇ 5ರಂದು ಆರಂಭವಾಗಬೇಕಿದ್ದು, ಅದನ್ನು ಮುಂದೂಡಲಾಗಿದ್ದು ಇದೇ 12ರಂದು ನಡೆಯಲಿದೆ.
ಇತರ ಕೆಳ ಹಂತದ ಸೆಮೆಸ್ಟರ್ ಪರೀಕ್ಷೆಗಳು ಜೂನ್ 23ರಂದು ಆರಂಭವಾಗಲಿದೆ. ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ಜುಲೈ 31ರಂದು ಮುಗಿಯಲಿದೆ ಎಂದು ತಿಳಿಸಿದರು.
ವಿವರವಾದ ವೇಳಾಪಟ್ಟಿ ಇದೇ 3ರಂದು ಘೋಷಿಸಲಾಗುವುದು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಮುಂದೂಡಿಕೆExamsVisvesvaraya Technological UniversityPostponeವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯಫಲಿತಾಂಶಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


