ರಾಜ್ಯ

ಸಹಸ್ರ ಸಂಖ್ಯೆಯಲ್ಲಿ ಬಂದ ರೈತರು: ಪ್ರತಿಭಟನಾಕಾರರನ್ನು ಹೊರವಲಯದಲ್ಲಿಯೇ ತಡೆದ ಪೊಲೀಸರು

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಇತರ ರೈತಪರ ಸಂಘಟನೆಗಳು ನಗರದ ಹೊರವಲಯದಲ್ಲಿ...

ಸಹಸ್ರ ಸಂಖ್ಯೆಯಲ್ಲಿ ಬಂದ ರೈತರು: ಪ್ರತಿಭಟನಾಕಾರರನ್ನು ಹೊರವಲಯದಲ್ಲಿಯೇ ತಡೆದ ಪೊಲೀಸರು
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಇತರ ರೈತಪರ ಸಂಘಟನೆಗಳು  ನಗರದ ಹೊರವಲಯದಲ್ಲಿ ನಡೆಸುತ್ತಿದ್ದ ಭಾರೀ ಸಾಮೂಹಿಕ ಪ್ರತಿಭಟನೆಯನ್ನು ನಾಶಗೊಳಿಸಿದೆ.
ಜನದಟ್ಟಣೆಯಿಂದ ಸಂಚಾರಕ್ಕೆ ಅಡ್ಡಿಯುಂಟಾಗುವ ಭೀತಿಯಿಂದ ಪೊಲೀಸರು ರೈತರು ನಗರಕ್ಕೆ ಪ್ರವೇಶಿಸುವುದನ್ನು ತಡೆಯಲು ನಿರ್ಧರಿಸಿದರು. ದೇವನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 44ರ ರಾಣಿ ಕ್ರಾಸ್ ಸಮೀಪ ಸುಮಾರು 2,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಜಮಾಯಿಸಿದ್ದರು.
ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸಲು ಆಗ್ರಹಿಸಿ ಚಿಕ್ಕಬಳ್ಳಾಪುರ ದೇವನಹಳ್ಳಿ, ಹಾಗೂ ಕೋಲಾರದ ರೈತರು ರಾಜ್ಯ ಸರಕಾರದ ವಿರುದ್ಧ ಬೃಹತ್ ಬೈಕ್ ರಾಲಿಯನ್ನು ನಡೆಸಿದರು. ನಗರದೊಳಗೆ ಪ್ರವೇಶಿಸಲು ಬಿಡದಿದ್ದಕ್ಕಾಗಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಬರಗಾಲ ಪೀಡಿತ ಜಿಲ್ಲೆಗಳಿಗೆ ಸಾಕಷ್ಟು ನೀರು ಬಿಡುಗಡೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಚಿಕ್ಕಬಳ್ಳಾಪುರದಲ್ಲಿ ಬೃಹತ್ ಬೈಕ್ ರಾಲಿಗೆ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಚಾಲನೆ ನೀಡಿದರು. 
ಚಿಕ್ಕಬಳ್ಳಾಪುರ, ಕೋಲಾರ ಹಾಗೂ ದೇವನಹಳ್ಳಿಯಲ್ಲಿ ನೀರಿನ ಸಮಸ್ಯೆ ತಲೆದೋರಿರುವುದರಿಂದ ಶಾಶ್ವತ ನೀರಾವರಿ ಯೋಜನೆ ಜಾರಿಗೊಳಿಸಬೇಕೆಂದು ಸಾವಿರಾರು ರೈತರು ರಾಲಿಯಲ್ಲಿ ಪಾಲ್ಗೊಂಡಿದ್ದರು.
ಪ್ರತಿಭಟನಾನಿರತ ರೈತರ ಬಳಿ ಕೃಷಿ ಸಚಿವ ಕೃಷ್ಣ ಭೈರೇಗೌಡ ಆಗಮಿಸಿದ್ದಾರೆ. ಅವರ ಭೇಟಿಯ ಹೆಚ್ಚಿನ ವಿವರಗಳು ತಿಳಿದುಬಂದಿಲ್ಲ.
ಕಳೆದ ಮಾರ್ಚ್ ತಿಂಗಳಲ್ಲಿ ಸಾಗರೋಪಾದಿಯಲ್ಲಿ ಬಂದ ರೈತರು ನಗರದೊಳಗೆ ಪ್ರವೇಶಿಸಿ ಪ್ರತಿಭಟನೆ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.