ಬೆಂಗಳೂರು: ಬಿಜೆಪಿ ಕಾರ್ಯಕರ್ತನ ಹತ್ಯೆ, ರಾಷ್ಟ್ರೀಯ ತನಿಖಾ ದಳದಿಂದ ತನಿಖೆಗೆ ಪಕ್ಷ ಒತ್ತಾಯ
ಭಾರತೀಯ ಜನತಾ ಪಾರ್ಟಿಯ ಎಸ್.ಸಿ/ಎಸ್.ಟಿ ಯುವ ಮೋರ್ಚಾದ ಆನೇಕಲ್ ಘಟಕದ ಉಪಾಧ್ಯಕ್ಷ...

Published On :
ಬೆಂಗಳೂರು: ಭಾರತೀಯ ಜನತಾ ಪಾರ್ಟಿಯ ಎಸ್.ಸಿ/ಎಸ್.ಟಿ ಯುವ ಮೋರ್ಚಾದ ಆನೇಕಲ್ ಘಟಕದ ಉಪಾಧ್ಯಕ್ಷ ಹರೀಶ್ ಅವರನ್ನು ಬೆಂಗಳೂರಿನ ಹೊರವಲಯದ ಸೂರ್ಯ ಸಿಟಿ ಸಮೀಪ ಶಸ್ತ್ರಾಸ್ತ್ರಗಳಿಂದ ಕಳೆದ ರಾತ್ರಿ ಕೊಚ್ಚಿ ಕೊಲೆ ಮಾಡಲಾಗಿದೆ.
ತನ್ನ ಸ್ನೇಹಿತರನ್ನು ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಭೇಟಿ ಮಾಡಿ ರಾತ್ರಿ 9 ಗಂಟೆ ಸುಮಾರಿಗೆ ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಬೈಕ್ ನಲ್ಲಿ ಬರುತ್ತಿದ್ದ ಹರೀಶ್ ರನ್ನು ದಾರಿಯಲ್ಲಿ ತಡೆದು ಮೆಣಸಿನ ಪುಡಿ ಎರಚಿ ಶಸ್ತ್ರಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಹರೀಶ್ ಕೊಲೆಯ ಹಿಂದೆ ವೈಯಕ್ತಿಕ ದ್ವೇಷ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಾಥಮಿಕ ತನಿಖೆ ನಡೆಸಿದ ಪೊಲೀಸರು, ಇತ್ತೀಚೆಗೆ ಹರೀಶ್ ನ ಸಂಬಂಧಿ ರಾಜು ಮತ್ತು ಆತನ ಸೋದರರ ನಡುವೆ ಆನೇಕಲ್ ನಲ್ಲಿ ತೊಟ್ಟಿ ಮೀನುಗಾರಿಕೆ ಬಗ್ಗೆ ವಾಗ್ವಾದ ನಡೆದಿತ್ತು.
ಈ ಸಂಬಂಧ ರಾಜು ಮತ್ತು ಹರೀಶ್ ಮಧ್ಯೆ ಜಗಳ ನಡೆದಿತ್ತು. ಬಳಿಕ ಸ್ಥಳೀಯರ ಮಧ್ಯ ಪ್ರವೇಶದಿಂದ ಜಗಳ ತಣ್ಣಗಾಯಿತು. ಆದರೆ ಹರೀ ಶ್ ನಂತರ ರಾಜು ಮನೆಗೆ ಹೋಗಿ ಆತನನ್ನು ಮತ್ತು ಮನೆಯವರನ್ನು ಹೊಡೆದು ಬಂದಿದ್ದಾನೆ. ಬಳಿಕ ತನ್ನ ಸ್ನೇಹಿತರೊಂದಿಗೆ ಪಾರ್ಟಿ ಮಾಡಲು ರೆಸ್ಟೋರೆಂಟ್ ಗೆ ತೆರಳಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಅವಮಾನ ಸಹಿಸದೆ ರಾಜು ಮತ್ತು ಅವನ ಸ್ನೇಹಿತರು ಹರೀಶ್ ನನ್ನು ಕೊಂದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸೂರ್ಯನಗರ ಪೊಲೀಸರು ಕೇಸು ದಾಖಲಿಸಿದ್ದು ರಾಜು ಮತ್ತು ಅವನ ಸ್ನೇಹಿತರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಹರೀಶ್ ವಾರದ ಹಿಂದೆಯಷ್ಟೇ ಯುವ ಮೋರ್ಚಾದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇದೊಂದು ರಾಜಕೀಯ ದುರುದ್ದೇಶಪೂರಿತ ಕೊಲೆ ಎಂದು ಕುಟುಂಬದವರು ಶಂಕಿಸಿದ್ದಾರೆ.
ಕೊಲೆ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಕೊಲೆ ಬಗ್ಗೆ ರಾಷ್ಟ್ರೀಯ ತನಿಖಾ ದಳದಿಂದ ತನಿಖೆಯಾಗಬೇಕೆಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


