ಬಿಜೆಪಿ ಪರಿವರ್ತನಾ ರ್ಯಾಲಿ: ರಸ್ತೆಯಲ್ಲೇ ಸಿಲುಕಿದ 3 ಆ್ಯಂಬುಲೆನ್ಸ್ ಗಳು
ಬಿಜೆಪಿ ರ್ಯಾಲಿ ಪರಿಣಾಮ ಪೀಣ್ಯ, ನೆಲಮಂಗಲ, ತುಮಕೂರು ರಸ್ತೆ, ದಾಬಸ್'ಪೇಟೆ ಸೇರಿದಂತೆ ಸುತ್ತಮುತ್ತಲ ಭಾಗದ ರಸ್ತೆಗಳಲ್ಲಿ ಸಾಗುವ ಪ್ರಯಾಣಿಕರು ಸಂಚಾರ ದಟ್ಟಣೆಯಿಂದಾಗಿ ಅಕ್ಷರಶಃ ನಲುಗಿ ಹೋಗಿದ್ದರು...

Published On :
ಬೆಂಗಳೂರು: ಬಿಜೆಪಿ ರ್ಯಾಲಿ ಪರಿಣಾಮ ಪೀಣ್ಯ, ನೆಲಮಂಗಲ, ತುಮಕೂರು ರಸ್ತೆ, ದಾಬಸ್'ಪೇಟೆ ಸೇರಿದಂತೆ ಸುತ್ತಮುತ್ತಲ ಭಾಗದ ರಸ್ತೆಗಳಲ್ಲಿ ಸಾಗುವ ಪ್ರಯಾಣಿಕರು ಸಂಚಾರ ದಟ್ಟಣೆಯಿಂದಾಗಿ ಅಕ್ಷರಶಃ ನಲುಗಿ ಹೋಗಿದ್ದರು.
ಕಿಲೋಮೀಟರ್ ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸಂಚಾರದಟ್ಟಣೆಯಲ್ಲಿ ಸಾಗಿ ಬಂದ 3 ಆ್ಯಂಬುಲೆನ್ಸ್ ಗಳು ರಸ್ತೆಯ ಮಧ್ಯದಲ್ಲಯೇ ಸಿಲುಕಿಕೊಂಡಿದ್ದವು. ಪರಿಣಾಮ ಮುಂದೆ ಸಾಗದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆ್ಯಂಬುಲೆನ್ಸ್ ಗಳು ತೆರಳಲು ಅವಕಾಶ ಮಾಡಿಕೊಡಲು ಪೊಲೀಸರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಕೆಲ ಸಮಯದ ಬಳಿಕ ಆ್ಯಂಬುಲೆನ್ಸ್ ಗಳು ಸಾಗಲು ಪೊಲೀಸರು ಸುಗಮ ಹಾದಿ ಮಾಡಿಕೊಟ್ಟರು.
ಈ ನಡುವೆ ಸಂಚಾರ ದಟ್ಟಣೆಯಿಂದಾಗಿ ವಾಹನಗಳು ಮುಂದಕ್ಕೆ ಸಾಗದ ಪರಿಸ್ಥಿತಿ ನಿರ್ಮಾಣವಾದಾಗ ಹಲವೆಡೆ ಪೊಲೀಸರು ಹಾಗೂ ವಾಹನ ಸವಾರರ ನಡುವೆ ಮಾತಿನ ಚಕಮಕಿ ನಡೆದ ಪ್ರಸಂಗಗಳು ಕೂಡ ನಡೆದಿದ್ದವು.
ಬೆಂಗಳೂರಿನಿಂದ ತುಮಕೂರಿಗೆ ಹೋಗುತ್ತಿದ್ದ ಬಹುತೇಕ ವಾಹನಗಳು ಸಂಕಷ್ಟಕ್ಕೆ ಸಿಲುಕುವಂತಾಗಿತ್ತು. ಇದರ ಪರಿಣಾಮ ನಗರದ ಹಲವೆಡೆ ಸಂಚಾರ ದಟ್ಟಣೆಗಳು ಕೂಡ ಎದುರಾಗಿತ್ತು. ಸಮಾವೇಶ ಮಧ್ಯಾಹ್ನ 2.30ಕ್ಕೆ ಮುಕ್ತಾಯಗೊಳ್ಳಬೇಕಿತ್ತು. ಆದರೆ, ಟೋಲ್ ಬೂತ್ ಗಳಲ್ಲಿ ಸಂಚಾರಿ ಪೊಲೀಸರು ಸಂಜೆ 6 ಗಂಟೆಯವರೆಗೂ ಕಾರ್ಯನಿರ್ವಹಿಸಿದ್ದರು. ಸಮಾವೇಶ ನಡೆದ ಸುತ್ತಮುತ್ತಲಿನ ಪ್ರದೇಶದಲ್ಲಿಯೇ ಹೆಚ್ಚು ಸಂಚಾರ ದಟ್ಟಣೆ ಉಂಟಾಗಿತ್ತು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ನೆಲಮಂಗಲ ಡಿವೈಎಸ್ಪಿ ನಾಗೇಂದ್ರ ಕುಮಾರ್ ಅವರು ಮಾತನಾಡಿ, ಸಂಚಾರ ದಟ್ಟಣೆ ಅಷ್ಟೇನೂ ಇರಲಿಲ್ಲ. ತಮಿಳುನಾಡು ಹಾಗೂ ಆಂಧ್ರಪ್ರದೇಶಕ್ಕೆ ಹೋಗುತ್ತಿದ್ದ ದೊಡ್ಡ ದೊಡ್ಡ ವಾಹನಗಳ ಮಾರ್ಗಗಳನ್ನು ದಾಬಸ್'ಪೇಟ್ ಕಡೆಗೆ ಬದಲಿಸಲಾಗಿತ್ತು. ಜನರು ರಸ್ತೆ ದಾಟಲು ಪ್ರತ್ಯೇಕ ಮಾರ್ಗವನ್ನು ಮಾಡಲಾಗಿತ್ತು. ಕೆಲವು ಸಂದರ್ಭದಲ್ಲಿ ಸಂಚಾರವನ್ನು ನಿಲ್ಲಿಸಬೇಕಾದ ಪರಿಸ್ಥಿತಿ ಎದುರಾಗಿತ್ತು ಎಂದು ತಿಳಿಸಿದ್ದಾರೆ.
ನಿರೀಕ್ಷೆಯಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಮಾವೇಶಕ್ಕೆ ಆಗಮಿಸಿರಲಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಸಮಾವೇಶವನ್ನು ಬೆಳಿಗ್ಗೆ 11.30ಕ್ಕೆ ಉದ್ಘಾಟಿಸಬೇಕಿದ್ದ ಬಿಜೆಪಿ ರಾಷ್ಟರಾಧ್ಯಕ್ಷ ಅಮಿತ್ ಶಾ ಅವರು 2 ಗಂಟೆಗಳು ತಡವಾಗಿ ಕಾರ್ಯಕ್ರಮಕ್ಕೆ ಬಂದಿದ್ದರು. ಮಧ್ಯಾಹ್ನ 1.45ರ ಸುಮಾರಿಗೆ ಅಮಿತ್ ಶಾ ಅವರು ಹೆಲಿಕಾಪ್ಟರ್ ಮೂಲಕ ಸಮಾವೇಶಕ್ಕೆ ಆಗಮಿಸಿದ್ದರು.
ಬಿಜೆಪಿ ರ್ಯಾಲಿಯಿಂದಾಗಿ ಮಾದವರ ಗೇಟ್ ಬಳಿ 1ಗಂಟೆಗೂ ಹೆಚ್ಚು ಕಾಲ ಆ್ಯಂಬುಲೆನ್ಸ್ ಸಿಲುಕಿಕೊಂಡಿತ್ತು. ಆ್ಯಂಬುಲೆನ್ಸ್ ನಲ್ಲಿ ಮೂರು ರೋಗಿಗಳಿದ್ದು, ರೋಗಿಗಳನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿತ್ತು. ಮತ್ತೊಂದು ಆ್ಯಂಬುಲೆನ್ಸ್ ನಲ್ಲಿ ಇಬ್ಬರು ರೋಗಿಗಳಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯುತ್ತಿತ್ತು. ಮತ್ತೊಂದು ಆ್ಯಂಬುಲೆನ್ಸ್ ರೋಗಿಯೊಬ್ಬರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಹೊತ್ತೊಯ್ತುತ್ತಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


