ರಾಜ್ಯ

ಖಾಸಗಿ ವೈದ್ಯರ ಮುಷ್ಕರ: ಸರ್ಕಾರಿ ವೈದ್ಯರ ರಜೆ ರದ್ದು ಮಾಡಿದ ರಾಜ್ಯ ಸರ್ಕಾರ

ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವ ರಾಜ್ಯ ಸರ್ಕಾರದ ಧೋರಣೆಗೆ ವಿರೋಧ ವ್ಯಕ್ತಪಡಿಸಿರುವ ಭಾರತೀಯ ವೈದ್ಯಕೀಯ ಸಂಸ್ಥೆಯು, ಖಾಸಗಿ ಆಸ್ಪತ್ರೆಗಳ ಮುಷ್ಕರಕ್ಕೆ ಕರೆ ನೀಡಿದೆ...

ಖಾಸಗಿ ವೈದ್ಯರ ಮುಷ್ಕರ: ಸರ್ಕಾರಿ ವೈದ್ಯರ ರಜೆ ರದ್ದು ಮಾಡಿದ ರಾಜ್ಯ ಸರ್ಕಾರ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವ ರಾಜ್ಯ ಸರ್ಕಾರದ ಧೋರಣೆಗೆ ವಿರೋಧ ವ್ಯಕ್ತಪಡಿಸಿರುವ ಭಾರತೀಯ ವೈದ್ಯಕೀಯ ಸಂಸ್ಥೆಯು, ಖಾಸಗಿ ಆಸ್ಪತ್ರೆಗಳ ಮುಷ್ಕರಕ್ಕೆ ಕರೆ ನೀಡಿದ್ದು, ಮುಷ್ಕರ ಹಿನ್ನಲೆಯಲ್ಲಿ ನ.3ರ ಬೆಳಿಗ್ಗೆ 8 ಗಂಟೆಯಿಂದ ನ.4ರ ಬೆಳಿಗ್ಗೆ 8 ಗಂಟೆಯವರೆಗೆ ರಾಜ್ಯದ ಖಾಸಗಿ ವೈದ್ಯಕೀಯ ಸಂಸ್ಥೆಗಳಲ್ಲಿ ಹೊರರೋಗಿಗಳ ಚಿಕಿತ್ಸೆ ಮತ್ತು ತಪಾಸಣೆ ಸ್ಥಗಿತಗೊಂಡಿವೆ.  

ವೈದ್ಯಕೀಯ ಸಮುದಾಯವನ್ನು ಬೆದರಿಸಿ ಸೇವೆ ಪಡೆಯುವಂತಹ ಜನವಿರೋಧಿ ಕಾಯ್ದೆಯಾದ ಕೆಎಂಪಿಎ ಆ್ಯಕ್ಟ್'ನ ಮಸೂದೆಯನ್ನು ಮುಂಬರುವ ಬೆಳಗಾವಿ ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲು ರಾಜ್ಯ ಸರ್ಕಾರ ಮುಂದಾಗಿರುವ ಹಿನ್ನಲೆಯಲ್ಲಿ ಸರ್ಕಾರಕ್ಕೆ ಎಚ್ಚರಿಕೆ ನೀಡುವ ಸಲುವಾಗಿ ಭಾರತೀಯ ವೈದ್ಯಕೀಯ ಸಂಸ್ಥೆಯ (ಐಎಂಎ) ಕರ್ನಾಟಕ ಶಾಖೆ ರಾಜ್ಯದ ಎಲ್ಲಾ ವೈದ್ಯರ ಸಂಘಟನೆಗಳು, ಹಾಗೂ ಸಿಬ್ಬಂದಿಗಳ ಸಂಘಟನೆಗಳ ಸಹಯೋಗದಲ್ಲಿ ಮುಷ್ಕರಕ್ಕೆ ಕರೆ ನೀಡಿದೆ. 

ಮುಷ್ಕರಕ್ಕೆ ನೀಡಿರುವ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ 8 ಗಂಟೆಯಿಂದ ನಾಳೆ ಬೆಳಿಗ್ಗೆ 8 ರವರೆಗೆ ಮುಷ್ಕರ ಮುಂದುವರೆಯಲಿದ್ದು,ಹೀಗಾಗಿ 24 ಗಂಟೆಗಳ ಕಾಲ ರಾಜ್ಯದ ಎಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳಲ್ಲಿ ಹೊರರೋಗಿಗಳ ಚಿಕಿತ್ಸೆ ಮತ್ತು ತಪಾಸಣೆ ಸ್ಥಗಿತಗೊಂಡಿವೆ. ಕೇವಲ ಒಳರೋಗಿಗಳ ತುರ್ತು ಚಿಕಿತ್ಸೆ ಮಾತ್ರ ಲಭ್ಯವಾಗಲಿದೆ. ತುರ್ತು ತಪಾಸಣೆ, ತುರ್ತು ಶಸ್ತ್ರಚಿಕಿತ್ಸೆ, ಆ್ಯಂಬುಲೆನ್ಸ್ ವ್ಯವಸ್ಥೆ, ಔಷಧ ಮಾರಾಟ ಹಾಗೂ ರಕ್ತ ಬಂಡಾರ ಸೌಲಭ್ಯಗಳು ಲಭ್ಯವಾಗಲಿದೆ. 

ಖಾಸಗಿ ಆಸ್ಪತ್ರೆಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನಲೆಯಲ್ಲಿ ರೋಗಿಗಳಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿರುವ ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯ ಎಲ್ಲಾ ವೈದ್ಯ ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗಳ ರಜೆಗಳನ್ನು ರದ್ದುಪಡಿಸಿ, ಕೂಡಲೇ ಎಲ್ಲರೂ ಸೇವೆಗೆ ಕಡ್ಡಾಯವಾಗಿ ಹಾಜರಾಗುಂತೆ ಸುತ್ತೋಲೆಯನ್ನು ಹೊರಡಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.