100 ಸಿಸಿ ವಾಹನಗಳ ನಿರ್ಬಂಧ: ಸರ್ಕಾರದ ಸುತ್ತೋಲೆಗೆ 'ಹೈ' ತಡೆ
ಹಿಂಬದಿ ಸೀಟು ಹೊಂದಿರುವ 100 ಸಿಸಿಗಿಂತ ಕಡಿಮೆ ಎಂಜಿನ್ ಸಾಮರ್ಥ್ಯದ ದ್ವಿಚಕ್ರ ವಾಹನಗಳ ನೋಂದಣಿ ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆಗೆ ಹೈಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ...

Published On :
ಬೆಂಗಳೂರು: ಹಿಂಬದಿ ಸೀಟು ಹೊಂದಿರುವ 100 ಸಿಸಿಗಿಂತ ಕಡಿಮೆ ಎಂಜಿನ್ ಸಾಮರ್ಥ್ಯದ ದ್ವಿಚಕ್ರ ವಾಹನಗಳ ನೋಂದಣಿ ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆಗೆ ಹೈಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.
ಸರ್ಕಾರದ ಸುತ್ತೋಲೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿರುವ ಹಿನ್ನಲೆಯಲ್ಲಿ ಮೊದಲಿನಂತೆ 100 ಸಿಸಿ ಎಂಜಿನ್ ಸಾಮರ್ಥ್ಯಕ್ಕಿಂತ ಕಡಿಮೆಯಿರುವ ವಾಹನಗಳ ನೋಂದಣಿ ರಾಜ್ಯದ್ಯಂತ ಆರಂಭವಾಗಲಿದೆ.
100 ಸಿಸಿ ಬೈಕ್ ಗಳ ಕುರಿತಂತೆ ಸಾರಿಗೆ ಇಲಾಖೆ ಈ ಹಿಂದೆ ಹೊರಡಿಸಿರುವ ಸುತ್ತೋಲೆ ರದ್ದತಿ ಕೋರಿ ಟಿವಿಎಸ್ ಮೋಟರ್ ಕಂಪನಿ ಲಿಮಿಟೆಡ್ ಹಾಗೂ ಹೀರೋ ಮೋಟೋ ಕಾರ್ಪ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಹಿಂಬದಿ ಸೀಟು ಅಳವಡಿಸಿದ 100 ಸಿಸಿಗಿಂತ ಕಡಿಮೆ ಎಂಜಿನ್ ಸಾಮರ್ಥ್ಯ ಹೊಂದಿರುವ ದ್ವಿಚಕ್ರ ವಾಹನಗಳ ನೋಂದಣಿ ನಿಷೇಧಿಸುವ ಕರ್ನಾಟಕ ಮೋಟಾರು ವಾಹನ ಅಧಿ ನಿಯಮ 1989ರ 143(3)ಗೆ ತಿದ್ದುಪಡಿ ಮಾಡುವವರೆಗೂ ಸುತ್ತೋಲೆಗೆ ತಡೆಯಾಜ್ಞೆ ನೀಡಿತು.
ಇದಕ್ಕೂ ಮುನ್ನ ಅರ್ಜಿ ವಿಚಾರಣೆ ವೇಳೆ ಕಂಪನಿಗಳ ಪರ ವಕೀಲರು ವಾದ ಮಂಡಿಸಿ, ಕರ್ನಾಟಕ ಮೋಟಾರು ವಾಹನ ಕಾರ್ಯೆ 1989ರ ಸೆಕ್ಷನ್ 143(3) ನಿಯಮದ ಪ್ರಕಾರ ಸರ್ಕಾರ, ಹಿಂಬದಿ ಸೀಟು ಅಳವಡಿಸಿರುವ 100 ಹಾಗೂ ಅದಕ್ಕಿಂತ ಕಡಿಮೆ ಸಿಸಿಯ ದ್ವಿಚಕ್ರ ವಾಹನಗಳ ನೋಂದಣಿ ನಿಷೇಧಿಸಿ ಅ.13ರ ಸುತ್ತೋಲೆ ಹೊರಡಿಸಿದೆ. ಆದರೆ, ಮೋಟಾರು ವಾಹನ ಕಾಯ್ದೆಯು ಕೇಂದ್ರ ಸರ್ಕಾರದ ಕಾಯ್ದೆಯಾಗಿದೆ. ಆದರೆ, ರಾಜ್ಯ ಸರ್ಕಾರ ಸೂಕ್ತ ತಿದ್ದುಪಡಿ ತರದೆ ನಿಷೇಧ ಮಾಡಿದೆ. ಇನ್ನು ಕೇಂದ್ರದಲ್ಲಿ ಕಾಯ್ದೆಯಲ್ಲಿ ಸುರಕ್ಷಿತ ಕ್ರಮಗಳೊಂದಿಗೆ 100 ಸಿಸಿ ಸಾಮರ್ಥ್ಯದ ದ್ವಿಚಕ್ರ ವಾಹನಗಕ್ಕೆ ಹಿಂಬದಿ ಸೀಟು ಅಳವಡಿಸಲು ಅವಕಾಶವಿದೆ. ಮೇಲಾಗಿ ಅರ್ಜಿದಾರರ ಕಂಪನಿಗಳು ಕೇಂದ್ರ ಸರ್ಕಾರದ ನಿಯಮಗಳಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಂಡಿವೆಎಂದು ತಿಳಿಸಿದರು.
ಬಳಿಕ ರಾಜ್ಯ ಸರ್ಕಾರವೇ ಈ ಕುರಿತು ತಿದ್ದುಪಡಿ ನಿಯಮ ರೂಪಿಸುವುದಾಗಿ ತಿಳಿಸಿದ್ದರಿಂದ ಹಾಲಿ ಸುತ್ತೋಲೆಗೆ ತಡೆಯಾಜ್ಞೆ ನೀಡಲಾಗುತ್ತಿದೆ ಎಂದು ನ್ಯಾಯಾಲಯ ಮಧ್ಯಂತ ಆದೇಶ ಹೊರಡಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


