ರಾಜ್ಯ

ಇಂದು ಬೆಂಗಳೂರು ಸುತ್ತಮುತ್ತ ತುಂತುರು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ನಗರದ ಕೆಲ ಭಾಗಗಳಲ್ಲಿ ನಿನ್ನೆ ಸಾಯಂಕಾಲದಿಂದ ಮಳೆಯಾಗಿದೆ. ಭಾರತೀಯ ...

ಇಂದು ಬೆಂಗಳೂರು ಸುತ್ತಮುತ್ತ ತುಂತುರು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ನಗರದ ಕೆಲ ಭಾಗಗಳಲ್ಲಿ ನಿನ್ನೆ ಸಾಯಂಕಾಲದಿಂದ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಇಂದು ಕೂಡ ನಗರದ ಹಲವಡೆ ಮಳೆಯಾಗಲಿದೆ.
ರಾಜಾಜಿನಗರ, ಮಲ್ಲೇಶ್ವರಂ,ಸದಾಶಿವನಗರ, ಯಲಹಂಕ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ತುಂತುರು ಮಳೆಯಾಗಲಿದೆ. ನಿನ್ನೆ ಅಪರಾಹ್ನದ ನಂತರ 2.2 ಮಿಲಿ ಮೀಟರ್ ಗಿಂತ ಕಡಿಮೆ ಮಳೆಯಾಗಿದೆ. ಆನೇಕಲ್ ಮತ್ತು ಅಗ್ರಹಾರ ದಾಸರಹಳ್ಳಿಯಲ್ಲಿ 1 ಮಿಲಿ ಮೀಟರ್ ನಷ್ಟು ನಿನ್ನೆ ಸಂಜೆ ಮಳೆ ಸುರಿದಿದೆ. ಬೆಂಗಳೂರಿನ ಹವಾಮಾನ ಇಲಾಖೆಯ ನಿರ್ದೇಶಕ ಎಸ್.ಎಂ.ಮೇಟ್ರಿ, ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದಾಗಿ ಮತ್ತು ತಮಿಳುನಾಡು ತೀರಭಾಗದಲ್ಲಿ ಮಳೆ ಬೀಳುತ್ತಿರುವುದರಿಂದ ತುಂತುರು ಮಳೆಯಾಗಲಿದೆ.
ನಗರದಲ್ಲಿ ಇಂದು ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.
ಈ ಮಧ್ಯೆ ರಾಜ್ಯದಲ್ಲಿ ಸೋಮವಾರಪೇಟೆ ತಾಲ್ಲೂಕಿನ ವಾಲ್ನೂರುಗತೂರನಲ್ಲಿ 7.5 ಮಿಲಿ ಮೀಟರ್ ಮತ್ತು ಮೈಸೂರಿನ ಹೆಬ್ಬಲಗುಪ್ಪೆಯಲ್ಲಿ 10.5 ಮಿಲಿ ಮೀಟರ್ ನಷ್ಟು ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಮಳೆಯಾಗಿದೆ.
ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡು ಭಾಗಗಳಲ್ಲಿ ಒಣಹವೆ ಮುಂದುವರಿದಿದೆ. ರಾಜ್ಯಾದ್ಯಂತ ಕನಿಷ್ಠ ತಾಪಮಾನದಲ್ಲಿ ಯಾವುದೇ ಹೆಚ್ಚಿನ ಬದಲಾವಣೆಯಾಗಿಲ್ಲ. ಉತ್ತರ ಒಳನಾಡಿನ ಬಹುತೇಕ ಕಡೆ ಮತ್ತು ದಕ್ಷಿಣ ಒಳನಾಡಿನಲ್ಲಿ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ನಿನ್ನೆ ವಿಜಯಪುರದಲ್ಲಿ ಅತಿ ಕಡಿಮೆ 13 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.