ಬೆಳಗಾವಿ: ಕಾರ್ ಪಲ್ಟಿಯಾಗಿ ಇಬ್ಬರು ವೈದ್ಯ ವಿದ್ಯಾರ್ಥಿಗಳು ಸಾವು
ಕಾರ್ ಪಲ್ಟಿಯಾಗಿ ಇಬ್ಬರು ವೈದ್ಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಬೆಳಗಾವಿ ತಾಲೂಕು ಕಮಕಾರಟ್ಟಿ ಸಮೀಪ ನಡೆದಿದೆ.

Published On :
ಬೆಳಗಾವಿ: ಕಾರ್ ಪಲ್ಟಿಯಾಗಿ ಇಬ್ಬರು ವೈದ್ಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಬೆಳಗಾವಿ ತಾಲೂಕು ಕಮಕಾರಟ್ಟಿ ಸಮೀಪ ನಡೆದಿದೆ.
ಜಯಂತ್ ರಾಯ್(22) ಮತ್ತು ನಿಶಾ(20) ಮೃತ ದುರ್ದೈವಿಗಳೆಂದು ತಿಳಿದು ಬಂದಿದ್ದು ಇವರು ಬೆಳಗಾವಿಯ ಕೆಎಲ್ಇ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ. ಘಟನೆಯಲ್ಲಿ ಇನ್ನೊಬ್ಬ ವ್ಯಕ್ತಿ ಅನುಶ್ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ಸೇರಿಸಲಾಗಿದೆ. ಮೂವರೂ ಬಿಹಾರದ ಪಟ್ನಾ ಮೂಲದವರೆನ್ನಲಾಗಿದ್ದು ಹುಬ್ಬಳ್ಳಿಯಿಂದ ಬೆಳಗಾವಿಗೆ ಕಾರ್ ನಲ್ಲಿ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಕಾರನ್ನು ಅತಿಯಾದ ವೇಗದಿಂದ ಚಲಾಯಿಸುತ್ತಿದ್ದದ್ದೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಘಟನೆ ಸಂಬಂಧ ಹಿರೆಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಳಗಾವಿBelgaummedical studentsವೈದ್ಯಕೀಯ ವಿದ್ಯಾರ್ಥಿಗಳುcar overturnKLE Medical Collegeಕಾರ್ ಅಪಘಾತಕೆಎಲ್ಇ ವೈದ್ಯಕೀಯ ಕಾಲೇಜು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


