ಮೊಬೈಲ್ ಗೀಳು; ರೈಲು ಡಿಕ್ಕಿ ಹೊಡೆದು ಕರಾಟೆ ಶಿಕ್ಷಕ ಸಾವು
ರೈಲು ಡಿಕ್ಕಿ ಹೊಡೆದ ಪರಿಣಾಮ ಕರಾಟೆ ಶಿಕ್ಷಕರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆಯೊಂದು ಯಲಹಂಕ ಬಳಿಯಿರುವ ಅಲ್ಲಲಸಂದ್ರ ರೈಲ್ವೇ ಗೇಟ್ ಬಳಿ ಶನಿವಾರ ನಡೆದಿದೆ...

Published On :
ಬೆಂಗಳೂರು: ರೈಲು ಡಿಕ್ಕಿ ಹೊಡೆದ ಪರಿಣಾಮ ಕರಾಟೆ ಶಿಕ್ಷಕರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟಂೆಯೊಂದು ಯಲಹಂಕ ಬಳಿಯಿರುವ ಅಲ್ಲಲಸಂದ್ರ ರೈಲ್ವೇ ಗೇಟ್ ಬಳಿ ಶನಿವಾರ ನಡೆದಿದೆ.
ಮನೋಜ್ ಕುಮಾರ್ (26) ಮೃತ ಕರಾಟೆ ಶಿಕ್ಷಕರಾಗಿದ್ದಾರೆ. ಅಮೃತಹಳ್ಳಿಯ ನಿವಾಸಿಯಾಗಿರುವ ಮನೋಜ್ ಅವರು, ಜಕ್ಕೂರಿನಲ್ಲಿ ಕರಾಟೆ ತರಬೇತಿ ಶಾಲೆಯನ್ನು ನಡೆಸುತ್ತಿದ್ದರು.
ಮನೋಜ್ ಕುಮಾರ್ ಅವರು ತಮ್ಮ ಗೆಳೆಯರೊಂದಿಗೆ ಊಟಕ್ಕೆಂದು ಸ್ಥಳೀಯ ಹೋಟೆಲ್ ವೊಂದಕ್ಕೆ ಬಂದಿದ್ದರು. ಈ ವೇಳೆ ಮನೋಜ್ ಅವರ ಮೊಬೈಲ್'ಗೆ ಸಂಬಂಧಿಕರೊಬ್ಬರ ಕರೆಯೊಂದು ಬಂದಿದೆ. ಕರೆ ಸ್ವೀಕರಿಸಿದ ಮನೋಜ್ ಅವರು ಮಾತನಾಡುತ್ತಾ ರೈಲ್ವೇ ಹಳಿ ಬಳಿ ಹೋಗಿದ್ದಾರೆ. ಈ ವೇಳೆ ಸ್ಥಳೀಯ ಪ್ರಯಾಣಿಕ ರೈಲು ಬರುತ್ತಿರುವುದನ್ನು ಮನೋಜ್ ಅವರು ಗಮನಿಸಿಲ್ಲ.
ವೇಗವಾಗಿ ದೊಡ್ಡಬಳ್ಳಾಪುರಕ್ಕೆ ಹೋಗುತ್ತಿದ್ದು ರೈಲು ಮನೋಜ್ ಅವರಿಗೆ ರಭಸದಿಂದ ಡಿಕ್ಕಿ ಹೊಡೆದಿದೆ. ಬಳಿಕ ಸಿಬ್ಬಂದಿಗಳು ಯಶವಂತಪುರ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ರೈಲು ಡಿಕ್ಕಿ ಹೊಡೆದ ಕೂಡಲೇ ಸ್ಥಳಕ್ಕೆ ಬಂದ ಸ್ನೇಹಿತರು ಮನೋಜ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ರೈಲು ಡಿಕ್ಕಿ ಹೊಡೆದ ಪರಿಣಾಮ ಮನೋಜ್ ಅವರ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದ ಕಾರಣ ಮನೋಜ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


