ಕಬಿನಿ ರೆಸಾರ್ಟ್ ಬಳಿ ಹುಲಿ ಪ್ರತ್ಯಕ್ಷ: ಭೀತಿಯಲ್ಲಿ ಜನತೆ
ಕಬಿನಿಯ ಜಂಗಲ್ ರೆಸಾರ್ಟ್ ಬಳಿ ಹುಲಿಯೊಂದು ಪ್ರತ್ಯಕ್ಷವಾಗಿದ್ದು, ಹುಲಿ ಪ್ರತ್ಯಕ್ಷವಾಗಿರುವ ಹಿನ್ನಲೆಯಲ್ಲಿ ಗ್ರಾಮಸ್ಥರು ಹಾಗೂ ಪ್ರವಾಸಿಗರು ಭೀತಿಗೊಳಗಾಗಿದ್ದಾರೆ...

Published On :
ಮೈಸೂರು: ಕಬಿನಿಯ ಜಂಗಲ್ ರೆಸಾರ್ಟ್ ಬಳಿ ಹುಲಿಯೊಂದು ಪ್ರತ್ಯಕ್ಷವಾಗಿದ್ದು, ಹುಲಿ ಪ್ರತ್ಯಕ್ಷವಾಗಿರುವ ಹಿನ್ನಲೆಯಲ್ಲಿ ಗ್ರಾಮಸ್ಥರು ಹಾಗೂ ಪ್ರವಾಸಿಗರು ಭೀತಿಗೊಳಗಾಗಿದ್ದಾರೆ.
ಹೆಗ್ಗದೇವನ ಕೋಟೆ ತಾಲೂಕಿನಲ್ಲಿರುವ ಕಬಿನಿಯ ಜಂಗಲ್ ರೆಸಾರ್ಟ್ ನಿನ್ನೆ ಹುಲಿಯೊಂದು ಕಾಣಿಸಿಕೊಂಡಿದೆ. ಹುಲಿ ಓಡಾಡುತ್ತಿರುವ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಹುಲಿಯನ್ನು ಕಂಡಿರುವ ಹೋಟೆಲ್ ಆಡಳಿತ ಮಂಡಳಿಯವರು ಕೂಡಲೇ ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಸುತ್ತಮುತ್ತಲಿನ ಪ್ರದೇಶದಲ್ಲಿ ಓಡಾಡದಂತೆ ಪ್ರವಾಸಿಗರಿಗೆ ಸೂಚನೆ ನೀಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಅಭಿಮನ್ಯು ಹಾಗೂ ಅರ್ಜುನ ಆನೆಯೊಂದಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದಾರೆ. ಇದೀಗ ಹುಲಿಗಾಗಿ ಅರ್ಜುನ ಹಾಗೂ ಅಭಿಮನ್ಯು ಹುಡುಕಾಟ ಆರಂಭಿಸಿದ್ದು, ಕಾರ್ಯಾಚರಣೆಯನ್ನು ಮುಂದುವರೆಸುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಅರಣ್ಯದೊಳಗೆ ಹುಲಿ ಹೋಗಿರುವ ಶಂಕೆಗಳು ವ್ಯಕ್ತವಾಗಿದ್ದು, ಹುಲಿಗಾಗಿ ಹುಡುಕಾಟ ನೆಡಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


