ರಾಜ್ಯ

ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡಲು 'ಹೈ' ನಕಾರ

ರಾಜ್ಯ ಸರ್ಕಾರ ಯೋಜಿಸಿರುವ ವಿವಾದಿತ ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡಲು ಹೈಕೋರ್ಟ್ ವಿಭಾಗೀಯ ಪೀಠ ಮಂಗಳವಾರ ನಿರಾಕರಿಸಿದೆ...

ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡಲು 'ಹೈ' ನಕಾರ
ಹೈಕೋರ್ಟ್
Published On :
ಬೆಂಗಳೂರು: ರಾಜ್ಯ ಸರ್ಕಾರ ಯೋಜಿಸಿರುವ ವಿವಾದಿತ ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡಲು ಹೈಕೋರ್ಟ್ ವಿಭಾಗೀಯ ಪೀಠ ಮಂಗಳವಾರ ನಿರಾಕರಿಸಿದೆ. 
ಸರ್ಕಾರದ ವತಿಯಿಂದ ನ.10 ರಂದು ರಾಜ್ಯದ್ಯಂತ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಮಾಡುವ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅ.24 ರಂದು ಹೊರಡಿಸಿರುವ ಸುತ್ತೋಲೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಅರ್ಜಿಯನ್ನು ವಿಚಾರಣೆ ನಡೆಸಿರುವ ನ್ಯಾಯಾಲಯವು, ಈ ಹಂತದಲ್ಲಿ ಟಿಪ್ಪು ಜಂಯತಿ ಆಚರಣೆಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೆ. ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಪಿಐಎಲ್'ನ್ನು ನ್ಯಾಯಾಲಯದ ವಜಾಗೊಳಿಸಿದೆ. 
ಕಾರ್ಯಕ್ರಮಕ್ಕೆ 3 ದಿನಗಳಿದ್ದು, ಈ ಹಂತದಲ್ಲಿ ತೀರ್ಪು ನೀಡಲು ಸಾಧ್ಯವಿಲ್ಲ. ಟಿಪ್ಪು ಆಚರಣೆ ಕುರಿತು ತಕರಾರು ಇದ್ದಲ್ಲಿ 4 ವಾರಗಳ ಬಳಿಕ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ನ್ಯಾಯಾಲಯ ಸೂಚಿಸಿದೆ. 
ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಮಾಡುವ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅ.24 ರಂದು ಹೊರಡಿಸಿರುವ ಸುತ್ತೋಲೆಯನ್ನು ರದ್ದುಗೊಳಿಸುವಂತೆ ಕೋರಿ ಕೊಡಗು ಮೂಲದ ಕೆ.ಪಿ. ಮಂಜುನಾಥ್ ಎಂಬುವವರು ಈ ಹಿಂದೆ ಅರ್ಜಿ ಸಲ್ಲಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.