ಬೆಂಗಳೂರು: ಸಿಎಂ ಸಿದ್ದರಾಮಯ್ಯ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
ಕನಕದಾಸ ಜಯಂತಿಯಂದು ಸಿಎಂ ಸಿದ್ದರಾಮಯ್ಯ ಭಾಷಣ ಮಾಡುವಾಗ ವ್ಯಕ್ತಿಯೊಬ್ಬ ಎದ್ದು ನಿಂತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಧಾನಸೌಧದಲ್ಲಿ ...

Published On :
ಬೆಂಗಳೂರು: ಕನಕದಾಸ ಜಯಂತಿಯಂದು ಸಿಎಂ ಸಿದ್ದರಾಮಯ್ಯ ಭಾಷಣ ಮಾಡುವಾಗ ವ್ಯಕ್ತಿಯೊಬ್ಬ ಎದ್ದು ನಿಂತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಧಾನಸೌಧದಲ್ಲಿ ನಡೆದಿದೆ.
ಮೈಸೂರು ಮೂಲದ ಪರಶುರಾಮ್ ಎಂಬ 55 ವರ್ಷದ ಕೆಪಿಎಸ್ಸಿ ಅಭ್ಯರ್ಥಿಯೋರ್ವ ತನಗೆ ನೇಮಕಾತಿ ಆದೇಶ ಕೊಡಲಿಲ್ಲ, ಇದರಿಂದ ನನಗೆ ಅನ್ಯಾಯವಾಗಿದೆ ಎಂದು ಕೂಗಾಡುತ್ತಾ ಮುಖ್ಯಮಂತ್ರಿ ಎದುರೇ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ, ಕೂಡಲೇ ಆವನನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಯಿತು.
ತಾನು ಕೆಪಿಎಸ್ ಸಿ 1993 ನೇ ಬ್ಯಾಚಿನ ಅಭ್ಯರ್ಥಿಯಾಗಿದ್ದು, ತನಗೆ ನೇಮಕಾತಿ ಆದೇಶ ಕೊಡದ ಕಾರಣ ಅನ್ಯಾಯವಾಗಿದೆ, ತನ್ನ ಉತ್ತರ ಪತ್ರಿಕೆಯನ್ನು ಕೆಪಿಎಸ್ಸಿ ಬದಲು ಮಾಡಿದೆ ಎಂದು ಆರೋಪಿಸಿದ್ದಾನೆ. ನಂತರ ಅಲ್ಲಿಗೆ ಬಂದ ಪೊಲೀಸ್ ಸಿಬ್ಬಂದಿ ಆತನನ್ನು ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದಿಂದ ಹೊರಗೆ ಕರೆದುಕೊಂಡು ಬಂದಿದ್ದಾರೆ. ಮೈಸೂರು ಮೂಲದ ಆತ ಬೆಳಗ್ಗೆ 8 ಗಂಟೆಗೆ ಕಾರ್ಯಕ್ರಮಕ್ಕೆ ಕೀಟನಾಶಕದ ಬಾಟಲಿಯೊಂದಿಗೆ ಆಗಮಿಸಿದ್ದ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Vidhana SoudhaSiddaramaiahಸಿದ್ದರಾಮಯ್ಯಆತ್ಮಹತ್ಯೆ ಯತ್ನವಿಧಾನ ಸೌಧKanakadasa Jayanthiಕನಕದಾಸ ಜಯಂತಿsuicide Attempt
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


