ರಾಜ್ಯ

ಕರ್ನಾಟಕದಲ್ಲಿ ಪ್ಲಾಸ್ಟಿಕ್ ನಿಷೇಧ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕರ್ನಾಟಕದಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ಮಾರಾಟ, ತಯಾರಿಕೆ, ವಿತರಣೆ ಮತ್ತು ಬಳಕೆ ನಿಷೇಧಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ....

ಕರ್ನಾಟಕದಲ್ಲಿ ಪ್ಲಾಸ್ಟಿಕ್ ನಿಷೇಧ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Published On :
ನವದೆಹಲಿ: ಕರ್ನಾಟಕದಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ಮಾರಾಟ, ತಯಾರಿಕೆ, ವಿತರಣೆ ಮತ್ತು ಬಳಕೆ ನಿಷೇಧಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ರಾಜ್ಯಾದ್ಯಂತ ಪ್ಲಾಸ್ಟಿಕ್ ನಿಷೇಧಿಸಿ ರಾಜ್ಯ ಸರ್ಕಾರ ಕಳೆದ ಮಾರ್ಚ್ 11, 2016ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಕೆನರಾ ಪ್ಲಾಸ್ಟಿಕ್ ತಯಾರಕರು ಮತ್ತು ವ್ಯಾಪಾರಿಗಳ ಸಂಘ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಮದನ್ ಬಿ ಲೋಕೂರ್ ಹಾಗೂ ನ್ಯಾಯಮೂರ್ತಿ ದೀಪಕ್ ಗುಪ್ತಾ ಅವರು ವಜಾಗೊಳಿಸಿದ್ದಾರೆ.
2016 ಮಾರ್ಚ್‌ 11ರಿಂದ ರಾಜ್ಯದಾದ್ಯಂತ ಕೆಲವು ಪ್ಲಾಸ್ಟಿಕ್‌ ವಸ್ತುಗಳ ಬಳಕೆ ಮೇಲೆ ಸರ್ಕಾರ ನಿಷೇಧ ಹೇರಿ ಆದೇಶ ಹೊರಡಿಸಿದೆ. 1986ರ ಪರಿಸರ ಸಂರಕ್ಷಣೆ ಕಾಯ್ದೆ ಪ್ರಕಾರ ಯಾರೂ ಕೂಡ ಪ್ಲಾಸ್ಟಿಕ್‌ ಬ್ಯಾಗ್‌, ಕ್ಯಾರಿಯರ್‌ ಬ್ಯಾಗ್‌, ಪೋಸ್ಟರ್‌, ಟೇಬಲ್‌ ಕವರ್‌, ಪ್ಲಾಸ್ಟಿಕ್‌ ಧ್ವಜ, ಪ್ಲಾಸ್ಟಿಕ್‌ ಥರ್ಮಾಕೋಲ್‌ ಬಳಸುವಂತಿಲ್ಲ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.