ಎಐಎಡಿಎಂಕೆ ಕರ್ನಾಟಕ ಘಟಕದ ಉಸ್ತುವಾರಿ ಪುಗಳೆಂದಿ ನಿವಾಸದ ಮೇಲೂ ಐಟಿ ದಾಳಿ!
ತಮಿಳುನಾಡಿನಲ್ಲಿರುವ ವಿಕೆ ಶಶಿಕಲಾ ಅವರಿಗೆ ಸಂಬಂಧಿಸಿದ ನಿವಾಸ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆಯೇ ಇತ್ತ ಎಐಎಡಿಎಂಕೆ ಕರ್ನಾಟಕ ಘಟಕದ ಉಸ್ತುವಾರಿ ಪುಗಳೆಂದಿ ಅವರ ನಿವಾಸದ ಮೇಲೂ ಐಟಿ ಅಧಿಕಾರಿಗಳು ನಡೆಸಿದ್ದಾರೆ.

Published On :
ಬೆಂಗಳೂರು: ಅತ್ತ ತಮಿಳುನಾಡಿನಲ್ಲಿರುವ ವಿಕೆ ಶಶಿಕಲಾ ಅವರಿಗೆ ಸಂಬಂಧಿಸಿದ ನಿವಾಸ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆಯೇ ಇತ್ತ ಎಐಎಡಿಎಂಕೆ ಕರ್ನಾಟಕ ಘಟಕದ ಉಸ್ತುವಾರಿ ಪುಗಳೆಂದಿ ಅವರ ನಿವಾಸದ ಮೇಲೂ ಐಟಿ ಅಧಿಕಾರಿಗಳು ನಡೆಸಿದ್ದಾರೆ.
ಬೆಂಗಳೂರಿನ ದೊಮ್ಮಲೂರು ಪ್ರದೇಶದಲ್ಲಿರುವ ಪುಗಳೆಂದಿ ನಿವಾಸದಲ್ಲಿ ಇಂದು ಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಇನ್ನು ಅತ್ತ ಚೆನ್ನೈನಲ್ಲಿ ಇಂದು ಬೆಳಗ್ಗೆ ಐಟಿ ಅಧಿಕಾರಿಗಳು ಏಕಕಾಲದಲ್ಲಿ ಒಟ್ಟು 11 ಪ್ರದೇಶಗಳಲ್ಲಿ ದಾಳಿ ನಡೆಸಿದ್ದಾರೆ. ಪ್ರಮುಖವಾಗಿ ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಅವರ ಆಪ್ತೆಯಾಗಿದ್ದ ವಿಕೆ ಶಶಿಕಲಾ ಮತ್ತು ಅವರ ಆಪ್ತರು, ಸಂಬಂಧಿಕರಿಗೆ ಸಂಬಂಧಿಸಿದ ಕಚೇರಿ ಮತ್ತು ನಿವಾಸಗಳ ಮೇಲೆ ದಾಳಿ ನಡೆದಿದ್ದು, ಜಯಾ ಟಿವಿ, ಜ್ಯಾಝ್ ಸಿನಿಮಾ ಸೇರಿದಂತೆ ಒಟ್ಟು 11 ಪ್ರದೇಶಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳು ನಡೆಸಿ ದಾಖಲೆಗಳ ಶೋಧ ನಡೆಸಿದ್ದಾರೆ.
ಮೂಲಗಳ ಪ್ರಕಾರ ಆದಾಯ ತೆರಿಗೆ ವಂಚನೆ ಸಂಬಂಧ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆಯಾದರೂ, ಇದರೊಂದಿಗೆ ಅಕ್ರಮ ಆಸ್ತಿ ಸಂಬಂಧವೂ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


