ರಾಜ್ಯ

ಒಂಟಿ ಮಹಿಳೆ ಕೊಲೆ ಪ್ರಕರಣ: ದಂಡುಪಾಳ್ಯ ಹಂತಕರಿಗೆ ಜೀವನ ಪರ್ಯಂತ ಶಿಕ್ಷೆ

ಬೆಂಗಳೂರಿನ ಮಾಗಡಿ ರಸ್ತೆಯ ಅಗ್ರಹಾರ ದಾಸರಹಳ್ಳಿ ನಿವಾಸಿ ಗೀತಾ ಎಂಬುವರನ್ನು ಹತ್ಯೆಗೈದು ಸುಲಿಗೆ ಮಾಡಿದ್ದ ಪ್ರಕರಣಕ್ಕೆ....

ಒಂಟಿ ಮಹಿಳೆ ಕೊಲೆ ಪ್ರಕರಣ: ದಂಡುಪಾಳ್ಯ ಹಂತಕರಿಗೆ ಜೀವನ ಪರ್ಯಂತ ಶಿಕ್ಷೆ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಬೆಂಗಳೂರಿನ ಮಾಗಡಿ ರಸ್ತೆಯ ಅಗ್ರಹಾರ ದಾಸರಹಳ್ಳಿ ನಿವಾಸಿ ಗೀತಾ ಎಂಬುವರನ್ನು ಹತ್ಯೆಗೈದು ಸುಲಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಡುಪಾಳ್ಯ ಗ್ಯಾಂಗ್‌ನ ಐವರಿಗೆ ಜೀವನ ಪರ್ಯಂತ ಶಿಕ್ಷೆ ಹಾಗೂ ತಲಾ ಐದು ಸಾವಿರ ರುಪಾಯಿ ದಂಡ ವಿಧಿಸಿ ವಿಶೇಷ ಕೋರ್ಟ್ ಗುರುವಾರ ತೀರ್ಪು ನೀಡಿದೆ.
ಪ್ರಕರಣದ ಸುಧೀರ್ಘ ವಿಚಾರಣೆ ನಡೆಸಿದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶಿವನಗೌಡ ಅವರು, ಐವರು ಅಪರಾಧಿಗಳಿಗೆ ಜೀವನ ಪರ್ಯಂತ ಶಿಕ್ಷೆ ವಿಧಿಸಿದ್ದಾರೆ.
ಒಂಟಿ ಮಹಿಳೆ ಕೊಲೆ ಪ್ರಕರಣದಲ್ಲಿ ದಂಡುಪಾಳ್ಯ ಗ್ಯಾಂಗ್‌ನ ದೊಡ್ಡ ಹನುಮ, ಲಕ್ಷ್ಮೀ, ಮುನಿಕೃಷ್ಣ, ನಲ್ಲತಿಮ್ಮ, ವೆಂಕಟೇಶ್ ದೋಷಿಗಳಾಗಿದ್ದು, ಎಲ್ಲಾ ಅಪರಾಧಿಗಳಿಗೂ ಜೀವನ ಪರ್ಯಂತ ಶಿಕ್ಷೆ ಮತ್ತು ತಲಾ 5 ಸಾವಿರ ರೂ. ದಂಡ ವಿಧಿಸಲಾಗಿದೆ. 
2000ನೇ ಇಸವಿಯಲ್ಲಿ ಬೆಂಗಳೂರಿನ ಅಗ್ರಹಾರ ದಾಸರಹಳ್ಳಿಯ ನಿವಾಸಿ ಗೀತಾ ಅವರನ್ನು ಐವರು ಸೇರಿ ಕೊಲೆ ಮಾಡಿದ್ದರು. ನಂತರ ಮನೆಯಲ್ಲಿದ್ದ ಸೀರೆ, ಬೆಲೆಬಾಳುವ ವಸ್ತುಗಳನ್ನು ದೋಚಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.