ರಾಜ್ಯ

ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್'ಗೆ ಸಂಬಂಧಿಸಿದ ಕಾಲೇಜು ಮೇಲೆ ಲೋಕಾಯುಕ್ತ ದಾಳಿ

ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರಿಗೆ ಸಂಬಂಧಿಸಿದ ಕಾಲೇಜೊಂದರ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆಂದು ಗುರುವಾರ ತಿಳಿದುಬಂದಿದೆ...

ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್'ಗೆ ಸಂಬಂಧಿಸಿದ ಕಾಲೇಜು ಮೇಲೆ ಲೋಕಾಯುಕ್ತ ದಾಳಿ
ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್
Published On :
ತುಮಕೂರು: ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರಿಗೆ ಸಂಬಂಧಿಸಿದ ಕಾಲೇಜೊಂದರ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆಂದು ಗುರುವಾರ ತಿಳಿದುಬಂದಿದೆ.
ಬೆಂಗಳೂರಿನ ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕುಲುವನಹಳ್ಳಿಯಲ್ಲಿರುವ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಮೇಲೆ ಲೋಕಾಯುಕ್ತ ಇಂಜಿನಿಯರ್ ಗಳು ದಾಳಿ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ. 
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಹಾಯಕ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹೆಚ್.ಎಸ್. ಶ್ರೀನಿವಾಸಮೂರ್ತಿಯವರು, ಗ್ರಾಮ ಪಂಚಾಯಿತಿ ಸದಸ್ಯರು ನೀಡಿದ ದೂರಿನ ಆಧಾರದ ಮೇಲೆ ದಾಳಿ ನಡೆಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ ಅವರಿಗೆ ಸೇರಿದ ಶೈಕ್ಷಣಿಕ ಕಟ್ಟಡಲ್ಲಿ ನಿಯಮಗಳನ್ನು ಉಲ್ಲಂಘಿಸಲಾಗುತ್ತಿದೆ ಎಂದು ದೂರುಗಳು ಬಂದಿದ್ದವು, ಕಟ್ಟಡದಲ್ಲಿ ಅಕ್ರಮವಾಗಿ ದಾಸ್ತಾನನ್ನು ನಿರ್ಮಿಸಲಾಗಿದೆ ಎಂದು ದೂರು ತಿಳಿಸಲಾಗಿತ್ತು ಎಂದು ಹೇಳಿದ್ದಾರೆ. 
ದೂರು ಹಿನ್ನಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ, ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿತ್ತು. ಪರಿಶೀಲನೆ ಬಳಿಕ ವರದಿಗಳನ್ನು ಸಿದ್ಧಪಡಿಸಿ, ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
ಬೇಗೂರು ಗ್ರಾಮ ಪಂಚಾಯಿತಿಯಿಂದ ಪರವಾನಗಿ ಪಡೆದು ಕಾಲೇಜನ್ನು ನಿರ್ಮಿಸಲಾಗಿತ್ತು. ಕಾಲೇಜು ನಿರ್ಮಿಸಲು 8 ಎಕರೆ ಭೂಮಿಯನ್ನು ನೀಡಲಾಗಿತ್ತು. ಆದರೆ, ಇದೀಗ 32 ಎಕರೆಯಲ್ಲಿ ಕಾಲೇಜು ಆವರಣವನ್ನು ನಿರ್ಮಿಸಲಾಗಿದೆ. ರೂ.45 ಲಕ್ಷ ಕಟ್ಟುವಂತೆ ನೋಟಿಸ್ ಜಾರಿ ಮಾಡಿದ್ದರು. ನೋಟಿಸ್ ನ್ನು ನಿರ್ಲಕ್ಷಿಸಲಾಗಿದೆ ಎಂದು  ಗ್ರಾಮ ಪಂಚಾಯತಿ ಸದಸ್ಯ ಜಗದೀಶ್ ಅವರು ಆರೋಪಿಸಿದ್ದಾರೆ. 
ಅಧಿಕಾರದಲ್ಲಿರುವ ಕೆಲ ಅಧಿಕಾರಿಗಳು ಕಂದಾಯ ಇಲಾಖೆ ಅಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿ ಹಾದಿ ತಪ್ಪಿಸುತ್ತಿದ್ದಾರೆಂದು ಮತ್ತೊಬ್ಬ ಗ್ರಾಮ ಪಂಚಾಯಿತಿ ಸದಸ್ಯ ಕೆಂಪಣ್ಣ ಅವರು ಆರೋಪ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.