ರಾಜ್ಯ

ಪ್ರತಿಭಟನೆಯ ನಡುವೆ ರಾಜ್ಯಾದ್ಯಂತ ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆ

ಪ್ರತಿ ಪಕ್ಷ ಬಿಜೆಪಿ ಹಾಗೂ ಕೆಲ ಹಿಂದೂಪರ ಸಂಘಟನೆಗಳ ತೀವ್ರ ವಿರೋಧದ ನಡುವೆಯೇ ರಾಜ್ಯ ಸರ್ಕಾರ ರಾಜ್ಯಾದ್ಯಂತ ಟಿಪ್ಪು ಜಯಂತಿಯನ್ನು ಆಚರಿಸಿದ್ದು,....

ಪ್ರತಿಭಟನೆಯ ನಡುವೆ ರಾಜ್ಯಾದ್ಯಂತ ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆ
ಬೆಂಗಳೂರಿನ ಟಿಪ್ಪು ಸುಲ್ತಾನ್ ಬೇಸಿಗೆ ಅರಮನೆಯಲ್ಲಿ ಟಿಪ್ಪು ಸುಲ್ತಾನ್ ಯುನೈಟೆಡ್ ಫೋರಂ ಸದಸ್ಯರು ಶುಕ್ರವಾರ ಟಿಪ್ಪು ಜಯಂತಿ ಆಚರಿಸಿದರು.
Published On :
ಬೆಂಗಳೂರು: ಪ್ರತಿ ಪಕ್ಷ ಬಿಜೆಪಿ ಹಾಗೂ ಕೆಲ ಹಿಂದೂಪರ ಸಂಘಟನೆಗಳ ತೀವ್ರ ವಿರೋಧದ ನಡುವೆಯೇ ರಾಜ್ಯ ಸರ್ಕಾರ ರಾಜ್ಯಾದ್ಯಂತ ಟಿಪ್ಪು ಜಯಂತಿಯನ್ನು ಆಚರಿಸಿದ್ದು, ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಹಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ.
ಟಿಪ್ಪು ಜಯಂತಿ ಆಚರಣೆ ವೇಳೆ ಹಿಂಸಾಚಾರ ನಡೆಯದಂತೆ ತಡೆಯಲು ರಾಜ್ಯ ಸರ್ಕಾರ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ ಕೈಗೊಂಡಿದ್ದು, ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿದೆ.
ಇಂದು ವಿಧಾನಸೌಧ ಸೇರಿದಂತೆ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಟಿಪ್ಪು ಜಯಂತಿ ಆಚರಿಸಲಾಗುತ್ತಿದೆ. 
ಮಡಿಕೇರಿಯಲ್ಲಿ ನಿಷೇಧಾಜ್ಞೆಯ ಹೊರತಾಗಿಯೂ ಭಾರೀ ಪ್ರತಿಭಟನೆಗಳನ್ನು ನಡೆಸಲಾಗುತ್ತಿದ್ದು, ಪ್ರತಿಭಟನಾ ನಿರತ ವಿರಾಜಪೇಟೆ ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ಸೇರಿದಂತೆ ಹಲವರನ್ನು ವಶಕ್ಕೆ ಪಡೆಯಲಾಗಿದೆ. 
ಮಡಿಕೇರಿಯಲ್ಲಿ ಟಿಪ್ಪು ಜಯಂತಿ ವಿರೋಧಿಸಿದ ಸಂಘ ಪರಿವಾರದ ಕಾರ್ಯಕರ್ತರು ಕಳೆದ ಬಾರಿ ಟಿಪ್ಪು ಜಯಂತಿ ವೇಳೆ ಘರ್ಷಣೆಯಲ್ಲಿ ಸಾವನ್ನಪ್ಪಿದ ಕುಟ್ಟಪ್ಪ ಅವರ ಹುತಾತ್ಮ ದಿನಾಚರಣೆಯನ್ನು ಆಚರಿಸಿದರು. ಇನ್ನು ಜಿಲ್ಲೆಯ ಕೆಲವು ಕಡೆ ಸಂಪೂರ್ಣ ಬಂದ್‌ ವಾತಾವರಣ ಕಂಡು ಬಂದಿದೆ.
ಇನ್ನು ಮಂಗಳೂರಿನಲ್ಲೂ ಟಿಪ್ಪು ಜಯಂತಿ ವಿರೋಧಿಸಿ ಪ್ರತಿಭಟನೆಗಳು ನಡೆದಿದ್ದು, ಹಲವರನ್ನು ವಶಕ್ಕೆ ಪಡೆಯಾಲಾಗಿದೆ.
ಮಂಗಳೂರಿನಲ್ಲಿ ಕಾರ್ಯಕ್ರಮಕ್ಕೆ ಏಕಾಂಗಿಯಾಗಿ ಬಂದಿದ್ದ ಬಿಜೆಪಿ ನಾಯಕ ಫ್ರಾಂಕ್ಲಿನ್‌ ಮೊಂತೆರೋ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.