ರಾಜ್ಯ

ಟಿಪ್ಪು ಜಯಂತಿಗೆ ವಿರೋಧ: ಮಡಿಕೇರಿಯಲ್ಲಿ ಪ್ರತಿಭಟನಾಕಾರರ ಬಂಧನ

ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆಗೆ ಮಡಿಕೇರಿಯಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ಟಿಪ್ಪು ಜಯಂತಿಯ ಆಚರಣೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರನ್ನು ಬಂಧಿಸಿದ್ದಾರೆ.

ಟಿಪ್ಪು ಜಯಂತಿಗೆ ವಿರೋಧ: ಮಡಿಕೇರಿಯಲ್ಲಿ ಪ್ರತಿಭಟನಾಕಾರರ ಬಂಧನ
ಮಡಿಕೇರಿ ಪ್ರತಿಭಟನೆ
Published On :
ಮಡಿಕೇರಿ: ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆಗೆ ಮಡಿಕೇರಿಯಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ಟಿಪ್ಪು ಜಯಂತಿಯ ಆಚರಣೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರನ್ನು ಬಂಧಿಸಿದ್ದಾರೆ. 
ಶಾಸಕ ಅಪ್ಪಚ್ಚುರಂಜನ್ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಪೊಲೀಸರು ತಡೆಯಲು ಪ್ರತಿಭಟನಾ ನಿರತರನ್ನು ಬಂಧಿಸಿದ್ದಾರೆ. ಪ್ರತಿಭಟನಾ ನಿರತರು ಟಿಪ್ಪು ವಿರುದ್ಧ ಘೋಷಣೆ ಕೂಗಿದ್ದಾರೆ. ರಾಜ್ಯಾದ್ಯಂತ ತೀವ್ರ ವಿರೋಧದ ನಡುವೆಯೂ ಟಿಪ್ಪು ಜಯಂತಿಯನ್ನು ಸೆಕ್ಷನ್ ನಿಷೇದಾಜ್ಞೆಯನ್ನು ಜಾರಿಗೆ ತಂದು ಆಚರಿಸಲಾಗುತ್ತಿದೆ. 
ಮಂಗಳೂರಿನಲ್ಲಿ ಬಿಜೆಪಿ ನಾಯಕನ ಬಂಧನ 
ಇನ್ನು ಇದೇ ವೇಳೆ ಮಂಗಳೂರಿನಲ್ಲಿ ಟಿಪ್ಪು ಜಯಂತಿಗೆ ಆಗಮಿಸಿದ ಬಿಜೆಪಿ ನಾಯಕನನ್ನು ಬಂಧಿಸಲಾಗಿದೆ. ಟಿಪ್ಪು ಜಯಂತಿ ಆಚರಣೆಗೆ ಅಡ್ಡಿಪಡಿಸುವ ಸಾಧ್ಯತೆ ಇರುವುದರಿಂದ ಫ್ರಾಂಕ್ಲಿನ್ ನನ್ನು ಬಂಧಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.