ಕಾರವಾರ: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ರಕ್ಷಣೆ
ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ ಘಟನೆ ಶನಿವಾರ ಉತ್ತರ ಕನ್ನಡ ಜಿಲ್ಲೆಯ ಕುಮಟಾ....

Published On :
ಕಾರವಾರ: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ ಘಟನೆ ಶನಿವಾರ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಗೋಕರ್ಣದ ಮುಖ್ಯ ಕಡಲತೀರದಲ್ಲಿ ನಡೆದಿದೆ.
ಉತ್ತರ ಪ್ರದೇಶ ಮೂಲದ ರಮೇಶ್ ಯಾದವ್ ಮಧ್ಯಪ್ರದೇಶ ಮೂಲದ ಕಮಲೇಶ್ ಕುಮಾರ್ ರಕ್ಷಿಸಲ್ಪಟ್ಟ ವಿದ್ಯಾರ್ಥಿಗಳಾಗಿದ್ದಾರೆ.
ಬೆಂಗಳೂರಿನಿಂದ ಏಳು ಜನ ವಿದ್ಯಾರ್ಥಿಗಳ ತಂಡ ಪ್ರವಾಸಕ್ಕೆಂದು ಗೋಕರ್ಣಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ಮುಖ್ಯ ಕಡಲತೀರದಲ್ಲಿ ನೀರಿಗೆ ಇಳಿದಾಗ ಎರಡು ಜನ ಅಲೆಗೆ ಕೊಚ್ಚಿ ಹೋಗಿದ್ದರು. ಸಮಯ ಪ್ರಜ್ಞೆ ಮೆರೆದ ಜೀವರಕ್ಷಕ ಸಿಬ್ಬಂದಿ ಮೋಹನ್ ಅಂಬಿ, ರಾಜು ಅಂಬಿ, ಚಂದ್ರಕಾಂತ್ ಹಾಗೂ ಪುರುಷೋತ್ತಮ್ ಹರಿಕಾಂತ್ ರಮೇಶ್ ಯಾದವ್ ಮತ್ತು ಕಮಲೇಶ್ ಕುಮಾರ್ ಅವರನ್ನು ರಕ್ಷಿಸಿದ್ದಾರೆ.
ಈ ಸಂಬಂಧ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


