ಮಳವಳ್ಳಿ: ಸೇತುವೆಗೆ ಬೈಕ್ ಡಿಕ್ಕಿ, ಇಬ್ಬರು ಸವಾರರ ಸಾವು
ಬೈಕ್ ಒಂದು ಸೇತುವೆಗೆ ಗುದ್ದಿದ ಪರಿಣಾಮ ಸವಾರರಿಬ್ಬರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ದಲ್ಲಿ ನಡೆದಿದೆ.

Published On :
ಮಳವಳ್ಳಿ: ಬೈಕ್ ಒಂದು ಸೇತುವೆಗೆ ಗುದ್ದಿದ ಪರಿಣಾಮ ಸವಾರರಿಬ್ಬರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ದಲ್ಲಿ ನಡೆದಿದೆ.
ಮಳವಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 209ರ ಚಿಲ್ಲಾಪುರ ಗೇಟ್ ಬಳಿ ಈ ಘಟನೆ ನಡೆದಿದ್ದು ಹಲಗೂರಿನ ಪ್ರತಾಪ್(23) ಬಾಣಸಮುದ್ರದ ಶಶಿ(24) ಮೃತ ದುರ್ದೈವಿಗಳು. ಘಟನೆಯಿಂದ ಪ್ರತಾಪ್ ಸ್ಥಳದಲ್ಲಿಯೇ ಮೃತಪಟ್ಟರೆ, ಶಶಿ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ.
ಅತಿಯಾದ ವೇಗವೇ ಈ ದುರ್ಘಟನೆಗೆ ಕಾರಣವೆಂದು ಹೇಳಲಾಗಿದ್ದು ಘಟನೆ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


