ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ರಕ್ಷಣೆ
ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಜೀವರಕ್ಷಕ ಸಿಬ್ಬಂದಿಗಳು ರಕ್ಷಣೆ ಮಾಡಿರುವ ಘಟನೆಯೊಂದು ಉತ್ತರ ಕನ್ನಡದ ಗೋಕರ್ಣದ ಮುಖ್ಯ ಕಡಲತೀರದಲ್ಲಿ ಶನಿವಾರ ನಡೆದಿದೆ...

Published On :
ಗೋಕರ್ಣ: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಜೀವರಕ್ಷಕ ಸಿಬ್ಬಂದಿಗಳು ರಕ್ಷಣೆ ಮಾಡಿರುವ ಘಟನೆಯೊಂದು ಉತ್ತರ ಕನ್ನಡದ ಗೋಕರ್ಣದ ಮುಖ್ಯ ಕಡಲತೀರದಲ್ಲಿ ಶನಿವಾರ ನಡೆದಿದೆ.
ರಮೇಶ್ ಯಾದವ್ ಮತ್ತು ಕಮಲೇಶ್ ಕುಮಾರ್ ರಕ್ಷಣೆಗೊಳಗಾದ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ.
ರಮೇಶ್ ಉತ್ತರಪ್ರದೇಶದ ಮೂಲದವರಾಗಿದ್ದು, ಕಮಲೇಶ್ ಕುಮಾರ್ ಮಧ್ಯಪ್ರದೇಶದ ನಿವಾಸಿಯಾಗಿದ್ದಾರೆ. ಐವರು ಸ್ನೇಹಿತರೊಂದಿಗೆ ರಮೇಶ್ ಹಾಗೂ ಕಮಲೇಶ್ ಪ್ರವಾಸಕ್ಕೆಂದು ಪೋಷಕರಿಗೆ ಮಾಹಿತಿ ನೀಡದೆಯೇ ಗೋಕರ್ಣಕ್ಕೆ ಬಂದಿದ್ದರು.
ಗೋಕರ್ಣ ಸಮುದ್ರದ ಬಳಿ ಬಂದ ರಮೇಶ್ ಹಾಗೂ ಕಮಲೇಶ್ ಇಬ್ಬರು ಈಜಲು ನೀರಿಗೆ ಇಳಿದಿದ್ದರು. ಈ ವೇಳೆ ಇಬ್ಬರೂ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಯುವಕರ ಕೂಗಾಟವನ್ನು ಕೇಳಿದ ಜೀವರಕ್ಷಕ ಸಿಬ್ಬಂದಿಗಳು ಕೂಡಲೇ ಸ್ಥಳಕ್ಕಾಗಮಿಸಿ ಇಬ್ಬರನ್ನೂ ರಕ್ಷಣೆ ಮಾಡಿದ್ದಾರೆ.
ಬಳಿಕ ಇಬ್ಬರೂ ವಿದ್ಯಾರ್ಥಿಗಳನ್ನು ಗೋಕರ್ಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಗೋಕರ್ಣ ಪೊಲೀಸರು ವಿಚಾರಣೆ ನಡೆಸಲು ಆರಂಭಿಸಿದಾಗ ವಿದ್ಯಾರ್ಥಿಗಳು ತಮ್ಮ ಹೆಸರನ್ನಷ್ಟೇ ಹೇಳಿದ್ದು, ಕಾಲೇಜಿನ ಹೆಸರು ಹಾಗೂ ಇನ್ನಿತರೆ ಮಾಹಿತಿ ನೀಡಲು ನಿರಾಕರಿಸಿದ್ದಾರೆ.
ಪೋಷಕರಿಗೆ ಮಾಹಿತಿ ನೀಡದೆಯೇ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದು, ಈ ಕುರಿತ ಮಾಹಿತಿ ತಿಳಿದರೆ ಸಮಸ್ಯೆ ಎದುರಾಗುತ್ತದೆ ಎಂದು ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


