ಭಾವರಿಯಾ ಗ್ಯಾಂಗ್ ಬಳಿಕ, ಶಿವಾಜಿನಗರದಲ್ಲಿ ಮತ್ತೆ ಮೂವರು ಕುಖ್ಯಾತ ಸರಗಳ್ಳರ ಬಂಧನ!
ನಗರದಲ್ಲಿ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು ಸರಗಳ್ಳತನ ಮಾಡುತ್ತಿದ್ದ ನಟೋರಿಯಸ್ ಸರಗಳ್ಳರನ್ನು ಶಿವಾಜಿನಗರ ಪೊಲೀಸರು ಬಂಧಿಸಿದ್ದಾರೆ.

Published On :
ಬೆಂಗಳೂರು: ನಗರದಲ್ಲಿ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು ಸರಗಳ್ಳತನ ಮಾಡುತ್ತಿದ್ದ ನಟೋರಿಯಸ್ ಸರಗಳ್ಳರನ್ನು ಶಿವಾಜಿನಗರ ಪೊಲೀಸರು ಬಂಧಿಸಿದ್ದಾರೆ.
ಈ ಹಿಂದೆ ಬಂಧನಕ್ಕೀಡಾದ ಭಾವರಿಯಾ ಗ್ಯಾಂಗ್ ನ ಸರಗಳ್ಳರಂತೆಯೇ ಕಪ್ಪುಬಣ್ಣದ ಪಲ್ಸರ್ ಬೈಕ್ ನಲ್ಲಿ ಸರಗಳ್ಳತನ ಮಾಡುತ್ತಿದ್ದ ಮೂವರು ಕಳ್ಳರನ್ನು ಶಿವಾಜಿನಗರ ಪೊಲೀಸರು ಬಂಧಿಸಿದ್ದಾರೆ, ಬಂಧಿತರನ್ನು ಇಬ್ರಾಹಿಂ ಫಯಾಜ್ ಎಂಬಾತರನ್ನು ಶಿವಾಜಿನಗರ ಪೊಲೀಸರು ಬಂಧಿಸಿದ್ದಾರೆ. ಅಂತೆಯೇ ಬಂಧಿತರಿಂದ ಸುಮಾರು 300 ತೂಕದ ಚಿನ್ನದ ಸರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಂತೆಯೇ ಕಳ್ಳತನಕ್ಕೆ ಬಳಸುತ್ತಿದ್ದ ಪಲ್ಸರ್ ಬೈಕ್ ಅನ್ನು ಕೂಡ ವಶಕ್ಕೆ ಪಡೆದಿದ್ದಾರೆ.
ಇನ್ನು ಪ್ರಸ್ತುತ ಬಂಧನಕ್ಕೀಡಾಗಿರುವ ಸರಗಳ್ಳರ ವಿರುದ್ಧ ಒಟ್ಟು 8 ಸರಗಳ್ಳತನ ಪ್ರಕರಣಗಳು ದಾಖಲಾಗಿದ್ದು, ಇವರ ಕಳ್ಳತನ ಕಾರ್ಯ ಸಿಸಿಟಿವಿ ಸೆರೆಯಾಗಿದ್ದವು. ಇವುಗಳ ಆದಾರ ಮೇಲೆ ಮುಖಚರ್ಯೆ ಕಂಡು ಹಿಡಿದ ಪೊಲೀಸರು ಇಂದು ಕಾರ್ಯಾಚರಣೆ ನಡೆಸಿ ಕಳ್ಳರನ್ನು ಬಂಧಿಸಿದ್ದಾರೆ.
ಈಗ್ಗೆ ಕೆಲವೇ ದಿನಗಳ ಹಿಂದಷ್ಟೇ ಕುಖ್ಯಾತ ಭಾವರಿಯಾ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೆ ಮೂವರು ಪಟ್ಟಿಗೆ ಸೇರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


