ಕೆಲಸದ ವೇಳೆ ಮೊಬೈಲ್ ಬಳಕೆ ನಿಷಿದ್ಧ: ಸಿಬ್ಬಂದಿಗಳಿಗೆ 'ಹೈ' ಎಚ್ಚರಿಕೆ
ನ್ಯಾಯಾಲಯದ ಕೆಲಸದ ಅವಧಿಯಲ್ಲಿ ಮೊಬೈಲ್ ಫೋನುಗಳನ್ನು ಬಳಕೆ ಮಾಡಿದರೆ, ಅದನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ ಎಂದು ನ್ಯಾಯಾಲಯದ ಸಿಬ್ಬಂದಿಗಳಿಗೆ ಹೈಕೋರ್ಟ್...

Published On :
ಬೆಂಗಳೂರು: ನ್ಯಾಯಾಲಯದ ಕೆಲಸದ ಅವಧಿಯಲ್ಲಿ ಮೊಬೈಲ್ ಫೋನುಗಳನ್ನು ಬಳಕೆ ಮಾಡಿದರೆ, ಅದನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ ಎಂದು ನ್ಯಾಯಾಲಯದ ಸಿಬ್ಬಂದಿಗಳಿಗೆ ಹೈಕೋರ್ಟ್ ಶನಿವಾರ ಎಚ್ಚರಿಕೆ ನೀಡಿದೆ.
ಹೈಕೋರ್ಟ್ ಜನರಲ್ ಅಶೋಕ ನಿಜಗಣ್ಣವರ ಸುತ್ತೋಲೆಯನ್ನು ಹೊರಡಿಸಿದ್ದು, ಸುತ್ತೋಲೆಯಲ್ಲಿ ನ್ಯಾಯಾಲಯದ ಕಲಾಪದ ವೇಳೆ ಸಿಬ್ಬಂದಿಗಳು ಮೊಬೈಲ್ ಫೋನ್ ಗಳನ್ನು ಬಳಕೆ ಮಾಡುತ್ತಿರುವುದು ಕಂಡು ಬಂದಿದೆ. ಮೊಬೈಲ್ ಬಳಕೆಯಿಂದಾಗಿ ನ್ಯಾಯಾಲಯದ ಅತ್ಯಮೂಲ್ಯ ಸಮಯ ಹಾಳಾಗುತ್ತಿದ್ದು. ಹೀಗಾಗಿ ನ್ಯಾಯಾಲಯದ ಕೆಲಸದ ಅವಧಿಯಲ್ಲಿ ಮೊಬೈಲ್ ಬಳಕೆಗೆ ನಿಷೇಧ ಹೇರಲಾಗಿದೆ ಎಂದು ತಿಳಿಸಲಾಗಿದೆ.
ಒಂದು ವೇಳೆ ಕೆಲಸದ ಅವಧಿಯಲ್ಲಿ ಸಿಬ್ಬಂದಿಗಳು ಮೊಬೈಲ್ ಫೋನ್ ಗಳನ್ನು ಬಳಕೆ ಮಾಡುವುದು ಅಥವಾ ಅವಿಧೇಯತೆಯಿಂದ ನಡೆದುಕೊಂಡಿರುವುದು ಕಂಡು ಬಂದಿದ್ದೇ ಆದರೆ, ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಬ್ಬಂದಿಗಳಿಗೆ ಎಚ್ಚರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


