ಕಳಸಾ-ಬಂಡೂರಿ: ಪ್ರತಿಭಟನಾಕಾರರಿಂದ ವಿಧಾನಸಭಾ ಚುನಾವಣೆ ಬಹಿಷ್ಕಾರದ ಬೆದರಿಕೆ
ಬೆಳಗಾವಿ, ಧಾರವಾಡ, ಗದಗ ಮತ್ತು ಉತ್ತರ ಕರ್ನಾಟಕದ ಇತರ ನಗರಗಳಿಗೆ ಕುಡಿಯುವ ನೀರು ಪೂರೈಸುವ ಕಳಸಾ-ಬಂಡೂರಿ ...

Published On :
ಬೆಂಗಳೂರು: ಬೆಳಗಾವಿ, ಧಾರವಾಡ, ಗದಗ ಮತ್ತು ಉತ್ತರ ಕರ್ನಾಟಕದ ಇತರ ನಗರಗಳಿಗೆ ಕುಡಿಯುವ ನೀರು ಪೂರೈಸುವ ಕಳಸಾ-ಬಂಡೂರಿ ಯೋಜನೆ ಅನುಷ್ಠಾನಗೊಳಿಸದಿದ್ದರೇ ಮುಂಬರುವ ವಿಧಾನಸಭೆ ಚುನಾವಣೆ ಬಹಿಷ್ಕರಿಸುವುದಾಗಿ ಪ್ರತಿಭಟನಾಕಾರರು ಬೆದರಿಕೆ ಹಾಕಿದ್ದಾರೆ.
ಕಳಸಾ- ಬಂಡೂರಿ ಪ್ರತಿಭಟನಾಕಾರರ ಕೇಂದ್ರ ಸಮಿತಿ ಮತ್ತು ಪೀಪಲ್ಸ್ ಪೊರಂ ರಾಜಕೀಯ ಪಕ್ಷಗಳು ಹಾಗೂ ವಿಧಾನಸಭೆ ಚುನಾವಣೆ ಬಹಿಷ್ಕರಿಸಲು ತೀರ್ಮಾನಿಸಿವೆ,. ನವೆಂಬರ್ 19 ರಂದು ದೆಹಲಿಗೆ ನಿಯೋಗ ತೆರಳಲಿದ್ದು, ನವೆಂಬರ್ 21 ರಂದು ಜಂತರ್ ಮಂಥರ್ ನಲ್ಲಿ ಪ್ರತಿಭಟನೆ ನಡೆಸಿ ಕಳಸಾ-ಬಂಡೂರಿ ಯೋಜನೆಯಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕೆಂದು ಆಗ್ರಹಿಸುವುದಾಗಿ ಕೇಂದ್ರ ಸಮಿತಿ ಅಧ್ಯಕ್ಷ ವಿಜಯ್ ಕುಲಕರ್ಣಿ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತತ್ವದಲ್ಲಿ ಪರಿವರ್ತನಾ ಯಾತ್ರೆ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಕರ್ನಾಟಕ ವಿಕಾಸ ಯಾತ್ರೆಗೆ ಪ್ರತಿಭಟನೆಯ ಬಿಸಿ ಮುಟ್ಟು ವ ಸಾಧ್ಯತೆಯಿದೆ. ಉತ್ತರ ಕರ್ನಾಟಕದಲ್ಲಿ ಈ ಯಾತ್ರೆಗಳ ವಿರುದ್ಧ ಹೋರಾಟ ನಡೆಸುವುದಾಗಿ ಅವರು ಹೇಳಿದ್ದಾರೆ.
ಕಳಸಾ-ಬಂಡೂರಿ ಯೋಜನೆ ಅನುಷ್ಠಾನಗೊಳಿಸಲು ರಾಜಕೀಯ ಇಚ್ಛಾಶಕ್ತಿ ಇಲ್ಲದಿರುವುದು ಪ್ರಮುಖ ಕಾರಣವಾಗಿದೆ, ಉತ್ತರ ಕರ್ನಾಟಕ ಜಿಲ್ಲೆಗಳ ಕುಡಿಯುವ ನೀರು ಪೂರೈಕೆಗಾಗಿ ರಾಜ್ಯ ಸರ್ಕಾರ ಯೋಜನೆ ಅನುಷ್ಠಾನಗೊಳಿಸಲು ಮನಸ್ಸು ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ವಿಧಾನಸಭೆ ಚುನಾವಣೆassembly electionಪ್ರತಿಭಟನಾಕಾರರುಬಹಿಷ್ಕಾರKalasa-Banduri projectಕಳಸಾ-ಬಂಡೂರಿ ಯೋಜನೆagitatorsboycott t
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


