ಬೆಂಗಳೂರು: ಗೋವಾ ಮದ್ಯ ದ ಅಕ್ರಮ ಸಾಗಾಟ ನಡೆಸುತ್ತಿದ್ದ ಮೂವರ ಬಂಧನ
ಗೋವಾ ಮದ್ಯವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮೂವರನ್ನು ಬೆಂಗಳೂರು ಅಬಕಾರಿ ಪೊಲೀಸರು ಬಂಧಿಸಿದ್ದಾರೆ ಮತ್ತು ಅವರುಗಳಿಂದ 250 ಲೀಟರ್ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ

Published On :
ಬೆಂಗಳೂರು: ಗೋವಾ ಮದ್ಯವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮೂವರನ್ನು ಬೆಂಗಳೂರು ಅಬಕಾರಿ ಪೊಲೀಸರು ಬಂಧಿಸಿದ್ದಾರೆ ಮತ್ತು ಅವರುಗಳಿಂದ 250 ಲೀಟರ್ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ
ಬಂಧಿತರನ್ನು ಪ್ರವೀಣ್ ನಾಯಕ, ಮುಕುಂದದತ್ತ ಖಂಡೇಕರ್, ನಾರಾಯಣ ಎಂದು ಗುರುತಿಸಲಾಗಿದ್ದು ಹಲವಾರು ವರ್ಷಗಳಿಂದ ಅವರುಗಳು ಈ ದಂಧೆಯಲ್ಲಿ ತೊಡಗಿಕೊಂಡಿದ್ದರೆಂದು ತಿಳಿದುಬಂದಿದೆ.
"ಅಂಕೋಲದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಕರೆತಂದಿದ್ದ ಖಾಸಗಿ ಸಂಸ್ಥೆಯೆ ಬಸ್ ನಲ್ಲಿ ಅಕ್ರಮ ಮದ್ಯ ಸಾಗಾಟ ನಡೆಯುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಗಾಂಧಿನಗರದ ಸೀಬರ್ಡ್ ಟ್ರಾವೆಲ್ಸ್ ಕಚೇರಿಯ ಮುಂಭಾಗದಲ್ಲಿ ನಿಂತಿದ್ದ ಬಸ್ ನ್ನು ತಪಾಸಣೆ ನಡೆಸಿದಾಗ ಅಕ್ರಮ ಮದ್ಯ ದೊರಕಿದೆ" ಎಂದು ಬೆಂಗಳೂರು ನಗರ ಜಿಲ್ಲಾ ಅಬಕಾರಿ ಉಪ ಆಯುಕ್ತರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Bangalore excise policeGoa liquorllegal traffickingIllegal trafficking of Goa liquorಬೆಂಗಳೂರು ಅಬಕಾರಿ ಪೋಲಿಸ್ಗೋವಾ ಮದ್ಯಅಕ್ರಮ ಕಳ್ಳಸಾಗಣೆಗೋವಾ ಮದ್ಯದ ಕಾನೂನುಬಾಹಿರ ಕಳ್ಳಸಾಗಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


